ಕರ್ನಾಟಕ ವಕೀಲರ ಪರಿಷತ್ ಅಧ್ಯಕ್ಷರಿಂದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ, ಅಧಿಕಾರ ವಹಿಸಿಕೊಂಡ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಮತ್ತು ದಿನೇಶ್ ಕುಮಾರ್ ಸಿಂಗ್ ಅವರಿಗೆ ಸ್ವಾಗತ

varthajala
0

 ಬೆಂಗಳೂರು, ಜುಲೈ 19, (ಕರ್ನಾಟಕ ವಾರ್ತೆ): ಕರ್ನಾಟಕ ವಕೀಲರ ಪರಿಷತ್ತಿನ ಅಧ್ಯಕ್ಷರಾದ ಮಿಟ್ಟಲ ಕೋಡ್ ಅವರು, ಇಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ, ಅಧಿಕಾರ ವಹಿಸಿಕೊಂಡ ಜಯಂತ್ ಬ್ಯಾನರ್ಜಿ ಮತ್ತು ದಿನೇಶ್ ಕುಮಾರ್ ಸಿಂಗ್ ಅವರನ್ನು ಹೈಕೋರ್ಟ್‍ನಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.

ನಂತರ ಮಾತನಾಡಿದ ಅವರು 1965ರಲ್ಲಿ ಜನಿಸಿದ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಅವರು, 1987ರಲ್ಲಿ ಅಲಹಾಬಾದ್ ವಿಶ್ವವಿದ್ಯಾಲಯದ ಸಿ.ಎಂ.ಪಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು. ನಂತರ ಅಲಹಬಾದ್ ಹೈಕೋರ್ಟ್‍ನಲ್ಲಿ ಸಿವಿಲ್ ಪ್ರಕರಣಗಳನ್ನು ಇತ್ಯಾರ್ಥಗೊಳಿಸಿದರು. 1989ರಲ್ಲಿ ಅಲಹಾಬಾದ್ ಹೈಕೋರ್ಟ್‍ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾದರು ಎಂದು ತಿಳಿಸಿದರು.
ನ್ಯಾಯಮೂರ್ತಿ ದಿನೇಶ್ ಕುಮಾರ್ ಸಿಂಗ್ ಅವರು 1966 ರಲ್ಲಿ ಲಕನೌನಲ್ಲಿ ಜನಿಸಿದರು. ಅಲಹಾಬಾದ್‍ನ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಗಳಿಸಿ ನಂತರ ದೆಹಲಿ ವಿಶ್ವವಿದ್ಯಾಲಯದಲ್ಲಿ 1992ರಲ್ಲಿ ಎಲ್.ಎಲ್.ಎಂ. ಪದವಿ ಪಡೆದರು. ಅಲಹಾಬಾದ್ ಹೈಕೋರ್ಟ್‍ನಲ್ಲಿ 1997ರಲ್ಲಿ ಸೇವೆ ಸಲ್ಲಿಸಿ, ನಂತರ 1998ರಲ್ಲಿ ದೆಹಲಿಯ ಸರ್ವೋಚ್ಛ ನ್ಯಾಯಾಲಯದಲ್ಲಿ ಕ್ರಿಮಿನಲ್, ಸಿವಿಲ್, ಆಡಳಿತ, ವಾಣಿಜ್ಯ ಮುಂತಾದ ಕಾನೂನು ಸಂಬಂಧಿಸಿದ ವ್ಯಾಜ್ಯಗಳನ್ನು ಇತ್ಯಾರ್ಥ ಪಡಿಸಿದ್ದಾರೆ.  ಅಲ್ಲದೇ ಉತ್ತರ ಪ್ರದೇಶ ಹಾಗೂ ಜಾರ್ಖಂಡ್‍ನ ಹೆಚ್ಚುವರಿ ಅಡ್ವಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್‍ನಲ್ಲಿ 2017ರಲ್ಲಿ ಹೆಚ್ಚಿವರಿ ನ್ಯಾಯಾಧೀಶರಾಗಿ, ನಂತರ 2019ರಲ್ಲಿ ಖಾಯಂ ನ್ಯಾಯಾದೀಶರಾಗಿ ಅಧಿಕಾರ ವಹಿಸಿಕೊಂಡು ಕೆಲಸ ನಿರ್ವಹಿಸಿದ್ದಾರೆ. 2023ರಿಂದ ಕೇರಳದಲ್ಲಿ ನ್ಯಾಯಾಧೀಶರಾಗಿ  ಸೇವೆ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ನೂತನವಾಗಿ ಅಧಿಕಾರ ಸ್ವೀಕರಿಸಿದ ಈ ಇಬ್ಬರು ನ್ಯಾಯಾಧೀಶರಿಗೆ ವೃತ್ತಿ ಜೀವನದಲ್ಲಿ ಒಳಿತಾಗಲಿ ಎಂದು ಶುಭ ಹಾರೈಸಿದರು.
ನಂತರ ಮಾತನಾಡಿದ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಅವರು, ವಕೀಲರು ಹಾಗೂ ನ್ಯಾಯಾಧೀಶರರ ಸಹಕಾರದಿಂದ ಪ್ರಾಮಾಣೀಕರಾಗಿ ಕೆಲಸ ನಿರ್ವಹಿಸುವುದಾಗಿ ತಿಳಿಸಿದರು. ಅಲ್ಲದೇ ತಮ್ಮ ವೃತ್ತಿ ಜೀವನದಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.
ಕರ್ನಾಟಕ ಹೈಕೋರ್ಟ್‍ಗೆ ವಾರ್ಗಾವಣೆಗೊಂಡು ನ್ಯಾಯಾದೀಶರಾಗಿ ನೇಮಕಗೊಂಡ ನ್ಯಾಯಮೂರ್ತಿ ದಿನೇಶ್ ಕುಮಾರ್ ಸಿಂಗ್ ಮಾತನಾಡಿ, ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಸೇರಿದಂತೆ ಹಲವು ನ್ಯಾಯಾಧೀಶರು ತಮ್ಮ ವೃತ್ತಿ ಜೀವನದಲ್ಲಿ ಸಹಕರಿಸಿರುವುದಾಗಿ ತಿಳಿಸಿದರು.
ಜನರ ಹಕ್ಕುಗಳ ರಕ್ಷಣೆ, ನ್ಯಾಯಸಮ್ಮತ ತೀರ್ಪು ನೀಡಿ ನ್ಯಾಯಾಂಗಕ್ಕೆ ಚ್ಯುತಿ ಬಾರದ ರೀತಿಯಲ್ಲಿ ತಾವು ಕೆಲಸ ನಿರ್ವಹಿಸುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.
ಸಮಾರಂಭದಲ್ಲಿ, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು, ನ್ಯಾಯಮೂರ್ತಿಗಳಾದ ವಿ. ಕಾಮೇಶ್ವರರಾವ್ ಸೇರಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ಮತ್ತು ಕಿರಿಯ ನ್ಯಾಯಾದೀಶರು ಹಾಗೂ ವಕೀಲರು ಉಪಸ್ಥಿತರಿದ್ದರು.    

Post a Comment

0Comments

Post a Comment (0)