ಬೆಂಗಳೂರು: ಬಹುಭಾಷಾ ನಟಿ ಬಿ. ಸರೋಜಾದೇವಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಬಿ. ಸರೋಜಾದೇವಿ ಅವರು ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರಾಗಿದ್ದರು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ನಟಿಸಿ ಹೆಸರುವಾಸಿಯಾಗಿದ್ದು, 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಅವರನ್ನು ಕನ್ನಡದಲ್ಲಿ ‘ಅಭಿನಯ ಸರಸ್ವತಿ’ ಎಂಬ ಉಪನಾಮದಿಂದ ಕರೆಯುತ್ತಿದ್ದರು. ಅವರಿಗೆ ಹತ್ತಾರು ಪ್ರಶಸ್ತಿಗಳೂ ಲಭಿಸಿದ್ದವು ಎಂದು ಅವರು ತಿಳಿಸಿದ್ದಾರೆ.
ಮೃತರ ಕುಟುಂಬ ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.