ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಇಂಡಿಯಾ ಅಲ್ಟರ್‍ನೇಟಿವ್ ಕೇರ್ ನೆಟ್ ವರ್ಕ್ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಎಲ್ಲಾ ಜಿಲ್ಲೆಗಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಸರ್ಕಾರ ಮತ್ತು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರುಗಳೊಂದಿಗೆ “ಕರ್ನಾಟಕದಲ್ಲಿ ಮಕ್ಕಳಿಗೆ ಕುಟುಂಬ ಆಧಾರಿತ ಪಾಲನೆ ಮತ್ತು ಪೋಷಣೆ” ಕುರಿತು ಆಗಸ್ಟ್ 1 ರಂದು ಬೆಳಿಗ್ಗೆ 10.00ಕ್ಕೆ ಬೆಂಗಳೂರಿನ ನಾಗರಭಾವಿಯಲ್ಲಿರುವ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯಲ್ಲಿ ರಾಜ್ಯ ಮಟ್ಟದ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳು ಮತ್ತು ಬಾಲ ನ್ಯಾಯ ಸಮಿತಿಯ ಅಧ್ಯಕ್ಷರಾದ ಎಸ್ ಸುನೀಲ್ ದತ್ ಯಾದವ್ ಅವರು ಸಮಾಲೋಚನಾ ಸಭೆಯನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣ ಗೌಡ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಶಮ್ಲಾ ಇಕ್ಬಾಲ್, ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರಾದ ಶ್ರೀಮತಿ ಲತಾ ಆರ್ ಇವರುಗಳು ಮುಖ್ಯ ಅತಿಥಿಗಳಾಗಿ ಮತ್ತು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳು ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ತೆಲಂಗಾಣ ಮತ್ತು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.