ಬೆಂಗಳೂರು, ಜುಲೈ 19, (ಕರ್ನಾಟಕ ವಾರ್ತೆ): ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾಗಿರುವ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ (ನಗರ ಸಭೆ / ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಕಿರಿಯ ಅಭಿಯಂತರರು (ಸಿವಿಲ್)-74+15(ಹೈ.ಕ) ಮತ್ತು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಗರ ಯೋಜಕರು 50+10(ಹೈ.ಕ) ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯಲ್ಲಿ ದಾಖಲಾಗಿರುವ ಅರ್ಜಿ ಸಂಖ್ಯೆ:2866-2870/2024ಕ್ಕೆ ಸಂಬಂಧಿಸಿದಂತೆ ದಿನಾಂಕ: 09-04-2025ರಂದು ಆದೇಶ ನೀಡಿದೆ.ಈ ಆದೇಶದನ್ವಯ ಎರಡೂ ಹುದ್ದೆಗಳ ಹೆಚ್ಚುವರಿ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಒಂದನ್ನು ಆಯ್ಕೆ ಮಾಡಿಕೊಂಡು ಮತ್ತೊಂದು ಹುದ್ದೆಯ ಆಯ್ಕೆ ಪ್ರಕ್ರಿಯೆಯಿಂದ ಹೊರಗುಳಿಯಲು (ಅಥವಾ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರೂ ಸಹ) ಸ್ವ-ಇಚ್ಚಾ ಹೇಳಿಕೆಯನ್ನು ಸಲ್ಲಿಸಲು ಇಚ್ಚಿಸಿದ್ದಲ್ಲಿ ಕರ್ನಾಟಕ ಲೋಕ ಸೇವಾ ಆಯೋಗದ ಅಂತರ್ಜಾಲದಲ್ಲಿ ಲಭ್ಯವಿರುವ ಸ್ವ-ಇಚ್ಛಾ ಹೇಳಿಕೆ ನಮೂನೆಯಲ್ಲಿ ಪ್ರಮಾಣ ಪತ್ರಗಳ (ಆಧಾರ ಕಾರ್ಡ್ / ಇಲಾಖೆಯ ಮೂಲ ಸೇವಾ ಗುರುತಿನ ಚೀಟಿ) ಸ್ವಯಂ ದೃಢೀಕೃತ ದಾಖಲೆಗಳೊಂದಿಗೆ ಖುದ್ದಾಗಿ ಆಯೋಗಕ್ಕೆ 2025 ರ ಜುಲೈ 30 ರೊಳಗಾಗಿ ಲಿಖಿತವಾಗಿ ಸ್ವ-ಇಚ್ಛಾ ಹೇಳಿಕೆಯನ್ನು ಸಲ್ಲಿಸುವುದು. ಈ ಸಂಬಂಧ ಮನವಿ / ಇ-ಮೇಲ್ ಮೂಲಕ ಸ್ವ-ಇಚ್ಛಾ ಹೇಳಿಕೆ ಸಲ್ಲಿಸಿದರೆ ಪರಿಗಣಿಸಲಾಗುವುದಿಲ್ಲವೆಂದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೌರಾಡಳಿತ ನಿರ್ದೇಶನಾಲಯದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಸ್ವ-ಇಚ್ಚಾ ಹೇಳಿಕೆ ಸಲ್ಲಿಸಲು ಅವಕಾಶ
July 19, 2025
0