ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಲೇಖಕಿಯರ ಸಂಘ ಇವರ ಸಹಯೋಗದಲ್ಲಿ ಆಗಸ್ಟ್ 5 ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ಬುಕರ್ ಪ್ರಶಸ್ತಿ ಪುರಸ್ಕøತರಾದ ಬಾನು ಮುಷ್ತಾಕ್ ಅವರಿಂದ ಉಪನ್ಯಾಸ- ಸಂವಾದ-ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಉಪನ್ಯಾಸಕರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಹಾಗೂ ಸಾಹಿತ್ಯಾಸಕ್ತರು ನೋಂದಾಯಿಸಿಕೊಳ್ಳಬಹುದಾಗಿದೆ. ನೋಂದಾಯಿಸಿಕೊಳ್ಳಲು ಆಗಸ್ಟ್ 2 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ https://sahithyaacademy. karnataka.gov.in ನ್ನು ವೀಕ್ಷಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.