ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ

varthajala
0

 ಬೆಂಗಳೂರು, ಜುಲೈ 18 (ಕರ್ನಾಟಕ ವಾರ್ತೆ) : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳೀಯು ನೋಂದಾಯಿತ ಫಲಾನುಭವಿಗಳು ಮರಣ ಹೊಂದಿದ್ದಲ್ಲಿ ನೀಡಲಾಗುತ್ತಿದ್ದ ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹ ರಾಶಿ ಸಹಾಯಧನ ಮೊತ್ತವನ್ನು ರೂ. 75,000/-ಗಳಿಂದ ರೂ 1,50,000/-ಗಳಿಗೆ ಹೆಚ್ಚಿಸಲಾಗಿದೆ.

ನೋಂದಾಯಿತ ಫಲಾನುಭವಿಗಳು ಕೆಲಸದ ಸ್ಥಳಗಳಲ್ಲಿ ಅಪಘಾತ ಉಂಟಾಗಿ ಮರಣ ಹೊಂದಿದ್ದಲ್ಲಿ ನೀಡಲಾಗುತ್ತಿದ್ದ ಪರಿಹಾರದ ಮೊತ್ತವನ್ನು ರೂ. 5,00,000/-ಗಳಿಂದ ರೂ. 8,00,000/-ಗಳಿಗೆ ಹೆಚ್ಚಿಸಲಾಗಿದೆ ಎಂದು ಬೆಂಗಳೂರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಕಾರ್ಯದರ್ಶಿಗಳಾದ ಶ್ರೀಮತಿ ಭಾರತಿ ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)