ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರುಗಳಾದ ಬದ್ರುದ್ದೀನ್.ಕೆ ಮತ್ತು ಡಾ.ಹರೀಶ್ ಕುಮಾರ್ ರವರು 2025 ನೇ ಆಗಸ್ಟ್ 02 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಅಧಿಕಾರಿಗಳು ಮತ್ತು ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಕಾಯ್ದೆ 2005 ಪರಿಣಾಮಾಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಸಂವಾದ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 12.30 ರಿಂದ 1.00 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಆವರಣದಲ್ಲಿ ಮಾಹಿತಿ ಹಕ್ಕು ಕಾಯ್ದೆ ಮಹತ್ವದ ಬಗ್ಗೆ ಸಾರ್ವಜನಿಕರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ಹಕ್ಕು ಕಾಯ್ದೆ - 2005ರ ಪ್ರಯೋಜನಗಳ ಕುರಿತು ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ರಾಜ್ಯ ಮಾಹಿತಿ ಆಯುಕ್ತರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.