ನವದೆಹಲಿ: ಮಾಲೆಗಾಂವ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಕೋರ್ಟ್ ಎಲ್ಲ ಆರೋಪಿಗಳನ್ನು ನಿರಪರಾಧಿಗಳೆಂದು ಆದೇಶ ನೀಡಿರುವುದು ಸತ್ಯಕ್ಕೆ ಸಂದ ಜಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಈ ಕುರಿತು ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ಅವರು, ಎನ್ ಐಎ ಕೋರ್ಟ್ ನೀಡಿರುವ ತೀರ್ಪು ಕೇಸರಿ ಭಯೋತ್ಪಾದನೆ ಎಂದು ಬಿಂಬಿಸಲು ಕಾಂಗ್ರೆಸ್ ನಡೆಸಿದ್ದ ಪಿತೂರಿ ಹಾಗೂ ಕೆಟ್ಟ ರಾಜಕೀಯನ್ನು ಬಯಲು ಮಾಡಿದೆ. ವಾಸ್ತವವಾಗಿ ಕೇಸರಿ ಭಯೋತ್ಪಾದನೆಯೇ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್ ನವರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಹಾಗೂ ಇಸ್ಲಾಮಿಕ್ ಭಯೋತ್ಪಾದಕ ಗುಂಪುಗಳಿಗೆ ಬೆಂಬಲ ನೀಡಲು ಮಾಡಿದ್ದ ಪ್ರಯತ್ನ ಬಟಾ ಬಯಲಾಗಿದೆ. ಕಾಂಗ್ರೆಸ್ ದೇಶದ ಜನರ ಕ್ಷಮೆ ಕೇಳಬೇಕು. ಈ ಪ್ರಕರಣದಲ್ಲಿ ಆರೋಪ ಮಾಡಿದವರು ಸಾರ್ವಜನಿಕ ಜೀವನದಿಂದ ದೂರ ಸರಿಯಬೇಕು ಎಂದು ಆಗ್ರಹಿಸಿದರು.