ಬೆಂಗಳೂರು, ಜುಲೈ 15, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿ.ಎಂ.ಆರ್.ಸಿ.ಎಲ್ ಸಹಯೋಗದೊಂದಿಗೆ ನಿರ್ಮಿಸಿರುವ “ಕೆ.ಎಸ್.ಆರ್.ಪಿ. ಸಮುದಾಯ ಭವನ” ಉದ್ಘಾಟನಾ ಸಮಾರಂಭವನ್ನು 2025ನೇ ಜುಲೈ 16 ರಂದು ಸಂಜೆ 4.30 ಗಂಟೆಗೆ ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್ ಜಂಕ್ಷನ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರಂಭದ ಉದ್ಘಾಟನೆ ಮಾಡಲಿದ್ದು, ಕೇಂದ್ರ ಸರ್ಕಾರದ ಮಾನ್ಯ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು.
ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಮಾನ್ಯ ಕೇಂದ್ರ ಸರ್ಕಾರದ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ, ಮಾನ್ಯ ಹಾಗೂ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರ ಘನ ಉಪಸ್ಥಿತಿಯಲ್ಲಿ, ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿರುವರು.
ಸಮಾರಂಭದಲ್ಲಿ, ಮಾನ್ಯ ಇಂಧನ ಇಲಾಖೆಯ ಸಚಿವರಾದ ಕೆ.ಜೆ. ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್, ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝಡ್. ಜಮೀರ್ ಅಹ್ಮದ್ ಖಾನ್, ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಭೈರೇಗೌಡ, ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಸುರೇಶ್ ಬಿ.ಎಸ್., ಕರ್ನಾಟಕ ವಿಧಾನಸಭೆಯ ಮಾನ್ಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ವಿರೋಧಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ, ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎನ್.ಎ. ಹ್ಯಾರಿಸ್, ಅನೇಕಲ್ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ಬೆಂಗಳೂರು ಮಹನಗರ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ಬಿ. ಶಿವಣ್ಣ ಮತ್ತು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ನಸೀರ್ ಅಹ್ಮದ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ರಾಜ್ಯ ಪೊಲೀಸ್ ಮಾಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷರಾದ ಡಾ. ಎಂ.ಎ. ಸಲೀಂ, ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್ ಅವರ ಗೌರವ ಉಪಸ್ಥಿತಿಯೊಂದಿಗೆ, ಲೋಕಸಭೆ ಸಂಸದರುಗಳು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.