ಬೆಂಗಳೂರು, ಜುಲೈ 14, (ಕರ್ನಾಟಕ ವಾರ್ತೆ): ಕೃಷಿ ಇಲಾಖೆ, ಕೃಷಿ ತಂತ್ರಜ್ಞರ ಸಂಸ್ಥೆ, ಬೆಂಗಳೂರು ಹಾಗೂ ಇಫ್ಕೋ ಸಂಸ್ಥೆ ಸಂಯುಕ್ತಾಶ್ರಯದಲ್ಲಿ “ಡಿ.ಎ.ಪಿ.ಗೆ ಪರ್ಯಾಯವಾಗಿ ಸಂಯುಕ್ತ ಹಾಗೂ ನ್ಯಾನೋ ರಸಗೊಬ್ಬರಗಳು” ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಜುಲೈ 19 ರಂದು ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿರುವ ಡಾ.ಹೆಚ್.ಆರ್.ಅರಕೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರವನ್ನು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಸ್.ವಿ.ಸುರೇಶ್, ಕೃಷಿ ಇಲಾಖೆಯ ಆಯುಕ್ತರಾದ ವೈ.ಎಸ್.ಪಾಟೀಲ, ನವದೆಹಲಿಯ ಇಫ್ಕೋ ಸಂಸ್ಥೆ, ಮಾರುಕಟ್ಟೆ ನಿರ್ದೇಶಕರಾದ ಡಾ.ಯೋಗೇಂದ್ರ ಕುಮಾರ್, ಕೃಷಿ ಇಲಾಖೆಯ ನಿರ್ದೇಶಕರಾದ ಡಾ.ಜಿ.ಟಿ. ಪುತ್ರ, ತಮಿಳುನಾಡಿನ ಕೊಯಮತ್ತೂರಿನ ಇಫ್ಕೋ ಎನ್‍ವಿಪಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಲಕ್ಷ್ಮಣನ್ ಅರಣಾಚಲಂ, ಬೆಂಗಳೂರಿನ ಇಫ್ಕೋ ಸಂಸ್ಥೆಯ ರಾಜ್ಯ ಮಾರುಕಟ್ಟೆ ವ್ಯವಸ್ಥಾಪಕರಾದ ಡಾ.ಸಿ.ನಾರಾಯಣಸ್ವಾಮಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷರಾದ ಡಾ.ಎ.ಬಿ.ಪಾಟೀಲ ಕಾರ್ಯಾಗಾರದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.