ಬೆಂಗಳೂರು 19.07.2025: ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ, ನ್ಯಾಯಮೂರ್ತಿಗಳಾದ ಜಯಂತ್ ಬ್ಯಾನರ್ಜಿ ಮತ್ತು ದಿನೇಶ್ ಕುಮಾರ್ ಸಿಂಗ್ ಅವರುಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ, ನ್ಯಾಯಮೂರ್ತಿಗಳಾದ ಜಯಂತ್ ಬ್ಯಾನರ್ಜಿ ಮತ್ತು ದಿನೇಶ್ ಕುಮಾರ್ ಸಿಂಗ್ ಅವರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ವಿಭು ಬಖ್ರು, ನ್ಯಾಯಮೂರ್ತಿಗಳಾದ ವಿ. ಕಾಮೇಶ್ವರ ರಾವ್, ಕಾನೂನು, ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ.ಪಾಟೀಲ್, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಕೆ.ಜಿ.ಜಗದೀಶ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ಇತರೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.