ಬೆಂಗಳೂರು : ಪ್ರಭು ಶ್ರೀರಾಮನು ರಾವಣನ ವಿರುದ್ಧ ವಾನರಸೇನೆಯ ಸಂಘಟನೆ ನಿರ್ಮಿಸಿದರು. ಛತ್ರಪತಿ ಶಿವಾಜಿ ಮಹಾರಾಜರೂ ಹಿಂದೂಗಳ ಮೇಲೆ ಆಕ್ರಮಣ ಮಾಡುವ ಇಸ್ಲಾಮೀ ಸುಲ್ತಾನರ ವಿರುದ್ಧ ಸಾಮಾನ್ಯ ಮಾವಳೆಗಳ ಸಂಘಟನೆಯನ್ನು ಮಾಡಿ ಹಿಂದವೀ ಸ್ವರಾಜ್ಯವನ್ನು ಸ್ಥಾಪಿಸಿದರು. ಈ ಸಂಘಟನೆಯು ಧರ್ಮಕ್ಕಾಗಿ ತ್ಯಾಗ ಮಾಡುವ ಪ್ರೇರಣಾದಾಯಿ ವಿಚಾರದ ಮೇಲೆ ಆಗಿತ್ತು. ಇಂತಹ ನಿಸ್ವಾರ್ಥ ಸಂಘಟನೆ ನಿರ್ಮಾಣವಾದಾಗಲೇ ನಿಜವಾದ ಅರ್ಥದಲ್ಲಿ ರಾಮರಾಜ್ಯ ಮತ್ತು ಹಿಂದವೀ ಸ್ವರಾಜ್ಯ ಸಾಕಾರಗೊಳ್ಳುತ್ತದೆ. ಪ್ರಸ್ತುತ ಕಾಲದಲ್ಲಿಯೂ ಇಂತಹ ಸಂಘಟನೆಯ ಆವಶ್ಯಕತೆಯಿರುವುದರಿಂದ ಪ್ರಭು ಶ್ರೀರಾಮನಂತೆ ಆದರ್ಶ ಸಂಘಟನೆ ನಿರ್ಮಿಸಲು ಕಟಿಬದ್ಧರಾಗೋಣ ಎಂದು ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಗುರು ಪ್ರಸಾದ್ ಗೌಡ ಇವರು ಕರೆ ನೀಡಿದರು.
ಅವರು 10 ಜುಲೈ 2025, ಗುರುವಾರದಂದು ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದ ಗುರುಪೂರ್ಣಿಮಾ ಮಹೋತ್ಸವದಲ್ಲಿ ಮಾತನಾಡುತ್ತಿದ್ದರು. ಈ ಕಾರ್ಯಕ್ರಮದಲ್ಲಿ ಇವರೂ ಸೇರಿದಂತೆ ಸನಾತನ ಸಂಸ್ಥೆಯ ಸಂತರಾದ ಶ್ರೀ. ಪೂಜ್ಯನೀಯ ರಮಾನಂದ ಗೌಡ, ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ. ಪ್ರಮೋದ್ ಮುತಾಲಿಕ್ ,ಬಿ ಬಿ ಎಮ್ ಪಿ ನಿಕಟಪೂರ್ವ ಸದಸ್ಯರಾದ ಶ್ರೀ. ಉಮೇಶ್ ಶೆಟ್ಟಿ, ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕರಾದ ಶ್ರೀ ಪುನೀತ್ ಕೆರೆಹಳ್ಳಿ, ಹೈಕೋರ್ಟ್ ನ ವಕೀಲರಾದ ಶ್ರೀ. ಕೃಷ್ಣ ಮೂರ್ತಿ ಸೇರಿದಂತೆ 1000ಕ್ಕೂ ಅಧಿಕ ಮಂದಿ ರಾಷ್ಟ್ರನಿಷ್ಠರು ಉಪಸ್ಥಿತರಿದ್ದರು. ಶ್ರೀ. ಗುರು ಪ್ರಸಾದ್ ಗೌಡ ಇವರು ಮುಂದುವರೆಸಿ ಪ್ರಸ್ತುತ ಹಿಂದೂ ಸಮಾಜದ ಮೇಲೆ ಅನೇಕ ರೀತಿ ಆಘಾತಗಳಾಗುತ್ತಿವೆ. ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಮಾಯಕ ಹಿಂದೂಗಳ ಮೇಲೆ ದೌರ್ಜನ್ಯವೆಸಗಿದ ಘಟನೆಗಳು ಬೆಳಕಿಗೆ ಬಂದಿವೆ, ಇತ್ತೀಚೆಗೆ ಮಂಡ್ಯದಲ್ಲಿ ಮತಾಂಧರು ಗೋಹತ್ಯೆ ಮಾಡುತ್ತಿರುವಾಗ ಅನೇಕ ಹಿಂದೂಗಳು ಗೋರಕ್ಷಣೆ ಮಾಡಲು ಮುಂದಾದರೆ ಪೊಲೀಸರು ಗೋರಕ್ಷಕರನ್ನೇ ಬಂಧಿಸಿದರು. ವಕ್ಫ್ ಕಾನೂನಿನ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮತಾಂಧರು ಗಲಭೆಗಳನ್ನು ನಡೆಸಿದರು.

ಇದರಲ್ಲಿ ಪೊಲೀಸರ ಮೇಲೂ ಆಕ್ರಮಣ ಮಾಡಲಾಯಿತು, ಹಾಗೆಯೇ ಹಿಂದೂಗಳ ಮನೆಗಳು, ಅಂಗಡಿಗಳನ್ನು ಸುಡಲಾಯಿತು. ಉತ್ತರಪ್ರದೇಶ, ರಾಜಸ್ಥಾನ ಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಮೇಲೆ ಮತಾಂಧರು ಕಲ್ಲು ತೂರಿ ಹಿಂಸಾಚಾರ ನಡೆಸಿದರು. ಒಟ್ಟಾರೆ ಅಂಶವೇನೆಂದರೆ, ಭಾರತದ ಮೇಲೆ ಆಂತರಿಕ ಮತ್ತು ಬಾಹ್ಯ ಶತ್ರುಗಳಿಂದ ನಡೆಯುತ್ತಿರುವ ಆಕ್ರಮಣಗಳು ಕೇವಲ ವಿಸ್ತರಣಾವಾದಕ್ಕಾಗಿ ಅಲ್ಲ, ಬದಲಾಗಿ ಹಿಂದೂ ಧರ್ಮವನ್ನು ನಾಶಪಡಿಸಲು ನಡೆಯುತ್ತಿವೆ. ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು 'ದೇಶ' ಕೇಳಿ ಗುಂಡು ಹಾರಿಸದೆ, 'ಧರ್ಮ' ಕೇಳಿ ಗುಂಡು ಹಾರಿಸಿದರು. ಇನ್ನು ನಮ್ಮ ಮುಂದೆ ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಮತಾಂತರದಂತಹ ಅನೇಕ ಸಮಸ್ಯೆಗಳು ಇವೆ. ಇದೆಲ್ಲವನ್ನು ನೋಡಿದಾಗ ಹಿಂದೆ ಪ್ರಭು ಶ್ರೀರಾಮರ ಕಾಲದಲ್ಲಿ, ಶಿವಾಜಿ ಮಹಾರಾಜರ ಕಾಲದಲ್ಲಿ, ಹಕ್ಕ ಬುಕ್ಕರ ಕಾಲದಲ್ಲಿ ಇದೇ ರೀತಿ ಧರ್ಮಸಂಕಟಗಳು ಎದುರಿಗಿದ್ದವು. ಈ ಎಲ್ಲ ಸಂದರ್ಭಗಳಲ್ಲಿಯೂ ಅವರು ಗುರುಗಳ ಮಾರ್ಗದರ್ಶನ ಪಡೆದು ಧರ್ಮಸಂಸ್ಥಾಪನೆಯ ಕಾರ್ಯ ಮಾಡಿದ್ದಾರೆ. ಹಾಗಾಗಿ ಗುರುಶಿಷ್ಯ ಪರಂಪರೆಗೆ ಹಿಂದಿನಿಂದಲೂ ಅಷ್ಟೇ ಮಹತ್ವವಿದೆ.
ಈಗ ನಾವೂ ಸಹ ಇಂದಿನ ಗುರುಪೂರ್ಣಿಮೆಯ ದಿನ ಧರ್ಮಸಂಸ್ಥಾಪನೆಗಾಗಿ ಸಂಘಟಿತರಾಗಲು ಸಂಕಲ್ಪ ಮಾಡಬೇಕಿದೆ ಎಂದರು.
ಪ್ರಮೋದ್ ಮುತಾಲಿಕ್ ಇವರು ಮಾತನಾಡಿ ಭಾರತಕ್ಕೆ ಸ್ವಾತಂತ್ರ್ಯ ಬಂದು 78ವರ್ಷ ಕಳೆದರು ನಮ್ಮ ಮೂಲ ಸಂಸ್ಕೃತಿಯನ್ನು ಉಳಿಸಿ - ಬೆಳೆಸಿ ಅದನ್ನು ಇಡೀ ಜಗತ್ತಿಗೆ ತಲುಪಿಸುವ ಹಂತದಲ್ಲಿ ಇರಬೇಕಿತ್ತು, ಆದರೆ ಇಂದು ನಮ್ಮ ಮೂಲ ಸಂಸ್ಕೃತಿ, ಹಿಂದೂ, ಹಿಂದುತ್ವ ಅಧೋಗತಿಗೆ ಸಾಗುತ್ತಿದೆ. ಬಾಲ ಗಂಗಾಧರನಾಥ ತಿಲಕರು, ಗುರುಗಳು ಹೇಳಿದ ಶಕ್ತಿ, ಭಕ್ತಿಯ ಮಾರ್ಗದಿಂದ ಪ್ರಯತ್ನವನ್ನು ಮಾಡಿದರಿಂದ ಸ್ವಾತಂತ್ರ್ಯ ಹೋರಾಟಕ್ಕೆ ಭದ್ರ ಬುನಾದಿ ಸಿಕ್ಕಿತು. ಸಂಗೊಳ್ಳಿ ರಾಯಣ್ಣ, ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಓಬವ್ವ ಅವರಂತೆ ಕ್ಷಾತ್ರತೇಜವನ್ನು, ಬ್ರಾಹ್ಮತೇಜವನ್ನು ಬೆಳಿಸಿಕೊಂಡರೆ ಮಾತ್ರ ಇಂದು ನಾವು ಸಮಾಜದಲ್ಲಿರುವ ಭ್ರಷ್ಟಾಚಾರ, ಹಿಂದೂ ಧರ್ಮದ ಅವಹೇಳನ, ಲವ್ ಜಿಹಾದ್, ಗೋಹತ್ಯೆ, ದೇಶವಿರೋಧಿಗಳ ವಿರುದ್ಧ ಹೋರಾಟ ಮಾಡಲು ಸಾಧ್ಯ. ಯಾವಾಗ ಕಾಶ್ಮೀರಿ ಹಿಂದುಗಳು ಪುನಃ ಕಾಶ್ಮೀರದಲ್ಲಿ ಹಿಂದಿನ ಹಾಗೆ ಬದುಕಲು ಸಾಧ್ಯವೋ ಮತ್ತು ಅವರ ಆಸ್ತಿ ಅವರಿಗೆ ಸಿಗುವುದೋ ಅಂದು ಮಾತ್ರ ಆರ್ಟಿಕಲ್ 370 ರದ್ದು ಮಾಡಿದರ ಪೂರ್ಣ ಉದ್ದೇಶ ಸಫಲವಾಗುತ್ತದೆ ಎಂದರು.