ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 2024-25ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2025 ರ ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸುವವರು 2024-25ನೇ ಸಾಲಿನ ಶೈಕ್ಷಣಿಕ ವರ್ಷದ 2025ರಲ್ಲಿ ನಡೆದ ಪರೀಕ್ಷೆಯಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು. ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಫಲಾನುಭವಿಯು 2025ನೇ ಮೇ 2 ರ ಪೂರ್ವದಲ್ಲಿ ಮಂಡಳಿಯಲ್ಲಿ ನೋಂದಣಿಯಾಗಿರಬೇಕು. ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಫಲಾನುಭವಿಯು 2025ನೇ ಏಪ್ರಿಲ್ 8 ರ ಪೂರ್ವದಲ್ಲಿ ಮಂಡಳಿಯಲ್ಲಿ ನೋಂದಣಿಯಾಗಿರಬೇಕು.
ಅರ್ಜಿಯನ್ನು ವೆಬ್‍ಸೈಟ್ https://karbwwb.karnataka.gov. in ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ ಸಂಖ್ಯೆ 155214 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕಟ್ಡಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.