ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಆಯ್ಕೆಪಟ್ಟಿ ಪ್ರಕಟ

varthajala
0

 ಬೆಂಗಳೂರು, ಜುಲೈ 10 (ಕರ್ನಾಟಕ ವಾರ್ತೆ): ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿಯಿರುವ 50 ಸಹಾಯಕ ಅಭಿಯಂತರರು ಹಾಗೂ 14 ಪ್ರಥಮ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳ ನೇರ ನೇಮಕಾತಿ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಗಳನ್ನು ಮಂಡಳಿಯ ವೆಬ್‍ಸೈಟ್ https://kuwsbb.karnataka.gov.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಅಪ್‍ಲೋಡ್ ಮಾಡಲಾಗಿದೆ ಎಂದು ಬೆಂಗಳೂರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಛಾಯಾಚಿತ್ರ ಶೀರ್ಷಿಕೆ:
ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿಯಾದರು.
ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಂಶಿ ಅವರಿಗೆ ಮುಖ್ಯಮಂತ್ರಿಗಳು ಶುಭ ಕೋರಿದರು. ಈ ಸಮಯದಲ್ಲಿ ಸಚಿವರಾದ ಬಿ.ಎಸ್. ಸುರೇಶ್ (ಬೈರತಿ) ಅವರು ಉಪಸ್ಥಿತರಿದ್ದರು.

Post a Comment

0Comments

Post a Comment (0)