ಬೆಂಗಳೂರು, ಆಗಸ್ಟ್ 29 (ಕರ್ನಾಟಕ ವಾರ್ತೆ):
ಜಯಚಾಮರಾಜೇಂದ್ರ ಸರ್ಕಾರಿ ಆಯುರ್ವೇದ ಮತ್ತು ಯುನಾನಿ ಆಸ್ಪತ್ರೆ ಹಾಗೂ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಯೋಗ ವಿಭಾಗ, ಧನ್ವಂತರಿ ರಸ್ತೆ, ಆನಂದರಾವ್ ವೃತ್ತ, ಬೆಂಗಳೂರು ಇಲ್ಲಿ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಉಚಿತ ಯೋಗಾಸನ, ಪ್ರಾಣಾಯಾಮ, ಧ್ಯಾನ ತರಗತಿಗಳನ್ನು, ವಿಶೇಷ ಉಪನ್ಯಾಸಗಳನ್ನು ಏರ್ಪಡಿಸಲಾಗಿದೆ.
ಉಪನ್ಯಾಸಗಳನ್ನು ಸೆಪ್ಟಂಬರ್ 1 ರಿಂದ ಸೆಪ್ಟಂಬರ್ 30 ರವರೆಗೆ ಬೆಳಿಗ್ಗೆ 7-30 ರಿಂದ 8-30 ರವರೆಗೆ ಆಸ್ಪತ್ರೆಯ ಯೋಗಾ ವಿಭಾಗದಲ್ಲಿ ನಡೆಸಲಾಗುತ್ತದೆ.
ನೊಂದಾವಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ಕಾರ್ತಿಕ್ ದೂರವಾಣಿ ಸಂಖ್ಯೆ 9845986119 ಅನ್ನು ಸಂಪರ್ಕಿಸಬೇಕೆಂದು ಜಯಚಾಮರಾಜೇಂದ್ರ ಸರ್ಕಾರಿ ಆಯುರ್ವೇದ ಮತ್ತು ಯುನಾನಿ ಆಸ್ಪತ್ರೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.