ಆಗಸ್ಟ್ 13 ರಂದು ಸಮಗ್ರ ಸಾಹಿತ್ಯ ಸಂಪುಟಗಳ ಲೋಕಾರ್ಪಣೆ ಕಾರ್ಯಕ್ರಮ

varthajala
0


ಬೆಂಗಳೂರು, ಆಗಸ್ಟ್ 10, (ಕರ್ನಾಟಕ ವಾರ್ತೆ):

ಕನ್ನಡ ಪುಸ್ತಕ ಪ್ರಾಧಿಕಾರವು “ಹಿರಿಯ ಸಾಹಿತಿಗಳಾದ ಸಿ.ಕೆ. ವೆಂಕಟರಾಮಯ್ಯ, ಗೌರೀಶ ಕಾಯ್ಕಿಣಿ, ಅ.ನ.ಕೃಷ್ಣರಾಯ, ಕೋ.ಚೆನ್ನಬಸಪ್ಪ ಹಾಗೂ ಡಾ.ಸಿದ್ಧಲಿಂಗಯ್ಯ ಅವರುಗಳ ಸಮಗ್ರ ಸಾಹಿತ್ಯ ಸಂಪುಟಗಳ ಲೋಕಾರ್ಪಣೆ” ಸಮಾರಂಭವನ್ನು ಆಗಸ್ಟ್ 13 ರಂದು ಬೆಳಿಗ್ಗೆ 11.00 ಗಂಟೆಗೆ ಕನ್ನಡ ಭವನದ ನಯನ ರಂಗಮಂದಿರದಲ್ಲಿ ಹಮ್ಮಿಕೊಂಡಿದೆ.

ಈ ಸಂದರ್ಭದಲ್ಲಿ ಕೊಪ್ಪಳದ ಹೆಸರಾಂತ ಹಿರಿಯ ಸಾಹಿತಿಗಳಾದ ಪ್ರೊ. ಅಲ್ಲಮ ಪ್ರಭು ಬೆಟ್ಟದೂರು ಅವರು ಕಾರ್ಯಕ್ರಮದಲ್ಲಿ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾದ ಶ್ರೀಮತಿ ಸಾವಿತ್ರಿ ಮುಜುಮದಾರ ಅವರು ಸಂಪುಟಗಳನ್ನು ಕುರಿತು ಮಾತನಾಡಲಿದ್ದಾರೆ. ಅಲ್ಲದೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಾದ ಶ್ರೀಮತಿ ಕೆ.ಎಂ.ಗಾಯಿತ್ರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕರಿಯಪ್ಪ ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)