ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ 2025-26 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆ

varthajala
0


 ಬೆಂಗಳೂರು, ಆಗಸ್ಟ್ 25, (ಕರ್ನಾಟಕ ವಾರ್ತೆ): ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.


ಇಂದು ವಿಧಾನಸೌಧ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡುತ್ತಾ, ಬಾಕಿಯಿರುವ ಬ್ಯಾಕ್‍ಲಾಗ್ ಹುದ್ದೆಗಳ ನೇಮಕಾತಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬ್ಯಾಕ್‍ಲಾಗ್ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು

ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ.  ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10 ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೆÇಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪೆÇಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

Post a Comment

0Comments

Post a Comment (0)