ಗದಗ - ಬೆಟಗೇರಿ ವ್ಯಾಪಾರ, ಸಂಸ್ಕøತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ

varthajala
0

 ಬೆಂಗಳೂರು, ಆಗಸ್ಟ್ 21, (ಕರ್ನಾಟಕ ವಾರ್ತೆ) :

ಗದಗ - ಬೆಟಗೇರಿ ವ್ಯಾಪಾರ, ಸಂಸ್ಕøತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲಿ  ಅಂಗೀಕಾರ ದೊರೆಯಿತು.
ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ ಗದಗ - ಬೆಟಗೇರಿ ವ್ಯಾಪಾರ, ಸಂಸ್ಕøತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಮಾನ್ಯ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರ ಪರವಾಗಿ ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ. ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಮಾಡುವಂತೆ ಪರ್ಯಾಲೋಚನೆಗೆ ಮಂಡಿಸಿದರು.
ವಿಧಾನ ಪರಿಷತ್ತಿನ ಸದಸ್ಯರಾದ ಎಸ್.ವ್ಹಿ. ಸಂಕನೂರ ಅವರ ಸ್ಪಷ್ಟನೆಗಳಿಗೆ ಉತ್ತರ ನೀಡಿದ ಸಚಿವರು ಮಾನ್ಯ ಸಭಾಪತಿಗಳನ್ನು ವಿಧೇಯಕ್ಕೆ ಅಂಗೀಕಾರ ನೀಡುವಂತೆ ಕೋರಿದರು. ಮಾನ್ಯ ಸಭಾಪತಿಗಳಿಂದ ಗದಗ - ಬೆಟಗೇರಿ ವ್ಯಾಪಾರ, ಸಂಸ್ಕøತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025ಕ್ಕೆ ಅಂಗೀಕಾರ ದೊರೆಯಿತು.

Post a Comment

0Comments

Post a Comment (0)