ಬೆಂಗಳೂರು, ಆಗಸ್ಟ್ 21 (ಕರ್ನಾಟಕ ವಾರ್ತೆ):
ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಯನ್ನು ಕೃಷಿ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷರಾದ ಎನ್.ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 22 ರಂದು ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಕೃಷಿ ಭವನದಲ್ಲಿ ಆಯೋಜಿಸಲಾಗಿದೆ.
ಸಭೆಯಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷರಾದ ಮಂಜುನಾಥ ಗೌಡ ಎಸ್.ಆರ್. ಅವರು ಉಪಸ್ಥಿತರಿರಲಿದ್ದಾರೆ. ಅಭಿವೃದ್ಧಿ ಇಲಾಖೆಯ ಮುಖ್ಯಸ್ಥರೊಂದಿಗೆ ರಾಜ್ಯದ ರೈತರ ಸಮಸ್ಯೆಗಳು ಹಾಗೂ ಕೃಷಿ ಇಲಾಖೆಯ ಕೃಷಿ ಪೂರಕ ಯೋಜನೆಗಳ ಕುರಿತು ಚರ್ಚಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.