ಆಗಸ್ಟ್ 25ರಂದು ಕೋ.ಚೆನ್ನಬಸಪ್ಪ ಅವರ ಮಹಾ ಕಾದಂಬರಿ “ಬೇಡಿ ಕಳಚಿತು ದೇಶ ಒಡೆಯಿತು” ಕೃತಿ ಕುರಿತ ಕಾರ್ಯಕ್ರಮ

varthajala
0


 ಬೆಂಗಳೂರು, ಆಗಸ್ಟ್ 21 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರವು ಚನ್ನಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಇವರ ಸಹಯೋಗದೊಂದಿಗೆ “ಅಂಗಳದಲ್ಲಿ ತಿಂಗಳ ಪುಸ್ತಕ” ಯೋಜನೆಯಡಿ ಕೋ. ಚೆನ್ನಬಸಪ್ಪ ಅವರ ಮಹಾ ಕಾದಂಬರಿ “ಬೇಡಿ ಕಳಚಿತು ದೇಶ ಒಡೆಯಿತು” ಕೃತಿ ಕುರಿತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ 11.00 ಗಂಟೆಗೆ  ಕಾರ್ಯಕ್ರಮ ಏರ್ಪಡಿಸಲಾಗಿದೆ.

ಖ್ಯಾತ ಸಾಹಿತಿಗಳಾದ ಡಾ. ರಾಜಶೇಖರ ಮಠಪತಿ (ರಾಗಂ) ಅವರು ಈ ಕೃತಿ ಅವಲೋಕನ ಮಾಡಲಿದ್ದಾರೆ. ಈ ಕಾರ್ಯಕ್ರಮವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಉದ್ಘಾಟನೆ ಮಾಡಲಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ ಕ್ಯೂ ಎ ಸಿ ಸಂಚಾಲಕರಾದ ಡಾ.ದೀಪ್ತಿ ಅವರು ಉಪಸ್ಥಿತರಿರಲಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪೆÇ್ರ. ಉμÁಮಾಲಿನಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ವಿ.ಹೆಚ್.ರಾಜಶೇಖರ್ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)