ಬೆಂಗಳೂರು, ಆಗಸ್ಟ್ 29, (ಕರ್ನಾಟಕ ವಾರ್ತೆ): ಪೊಲೀಸ್ ಇಲಾಖೆ ವತಿಯಿಂದ ಗೌರವಾನ್ವಿತ ರಾಷ್ಟ್ರಪತಿಯವರ ಪೊಲೀಸ್ ಪದಕ ಪ್ರಧಾನ ಸಮಾರಂಭವನ್ನು ರಾಜಭವನದ ಗಾಜಿನ ಮನೆಯಲ್ಲಿ ಆಗಸ್ಟ್ 30 ರಂದು ಶನಿವಾರ ಬೆಳಿಗ್ಗೆ 10-45 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಗೌರವಾನ್ವಿತ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು 78 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಗೌರವಾನ್ವಿತ ರಾಷ್ಟ್ರಪತಿಗಳ ಪದಕ ಮತ್ತು 28 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕೇಂದ್ರ ಗೃಹ ಸಚಿವರ ಪದಕಗಳನ್ನು ಪ್ರದಾನ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಹಿಸಲಿದ್ದು, ಗೃಹ ಸಚಿವರಾದ ಡಾ.ಜಿ. ಪರಮೇಶ್ವರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಒಳಾಡಳಿತ ಇಲಾಖೆಯ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿರುತ್ತಾರೆ.