ಬೆಂಗಳೂರು, ಆಗಸ್ಟ್ 21, (ಕರ್ನಾಟಕ ವಾರ್ತೆ) :
ಈ ಕುರಿತಂತೆ ಇಂದು ವಿಧಾನಪರಿಷತ್‍ನ ಕಲಾಪದ ವೇಳೆ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಅವರು ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು 317 (ಜೆ) ನಡಿ ನೇಮಕಾತಿಗೆ ಸಂಬಂಧಿಸಿದಂತೆ ಕಾಲ-ಕಾಲಕ್ಕೆ ಹೊರಡಿಸಲಾಗಿರುವ ಸುತ್ತೋಲೆಗಳಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳನ್ನು ಪರಿಹರಿಸಿ 3 ಜೂನ್ 2025 ರಂದು ಹೊಸ ಸುತ್ತೋಲೆ ಹೊರಡಿಸಲಾಗಿದೆ ಎಂದು ಹೇಳಿದರು.
ಸ್ಥಳೀಯ ವೃಂದ ಹಾಗೂ ಮಿಕ್ಕುಳಿದ ವೃಂದಕ್ಕೆ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸುವುದು ಸೇರಿದಂತೆ ನೇಮಕಾತಿಗೆ ಸಂಬಂಧಿಸಿದಂತೆ ಸ್ಪಷ್ಟವಾಗಿ ಇತ್ತೀಚಿನ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದ್ದು, ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ತಪ್ಪುಗಳಾದಲ್ಲಿ ನೇಮಕಾತಿ ಪ್ರಾಧಿಕಾರವೇ ನೇರಹೊಣೆ ಎಂದು ತಿಳಿಸಲಾಗಿದೆ ಎಂದರು.
