ನಗರದ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಏರ್ಪಡಿಸಿದ್ದ ವಿಶ್ವ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಹಾಗೂ ಬಾಲ್ಯವಿವಾಹ ನಿಷೇಧ ಕುರಿತ ಅರಿವು ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಬಾಲ್ಯವಿವಾಹದಂತಹ ಪ್ರಕರಣಗಳು ಹೆಚ್ಚಿನ ರೀತಿಯಲ್ಲಿ ಇರುವುದಕ್ಕೆ ಈ ಅಂಕಿಅಂಶಗಳು ಸಾಕ್ಷಿಯಾಗಿವೆ. ಬಾಲಗರ್ಭಿಣಿಯರು ದೈಹಿಕವಾಗಿ ಸದೃಢವಾಗಿರದ ಕಾರಣ ರಕ್ತಹೀನತೆಯಿಂದ ಹೆರಿಗೆ ಕೂಡ ಸಮಯದಲ್ಲಿ ಸಾವನ್ನಪ್ಪುತ್ತಿರುವುದು ಕಂಡುಬರುತ್ತಿವೆ. ಇದಕ್ಕೆಲ್ಲಾ ಬಾಲ್ಯ ವಿವಾಹವು ಮೂಲಕಾರಣವಾಗಿದೆ ಇದನ್ನು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ನಿರ್ಮೂಲನೆ ಮಾಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ನುಡಿಗಳನ್ನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ ಆರ್.ಜಿ., ಇತ್ತೀಚಿನ ದಿನಗಳಲ್ಲಿ ಚಿಕ್ಕಚಿಕ್ಕ ಮಕ್ಕಳಿಗೆ ಬೇರೆ ಬೇರೆ ಆಮಿಷಗಳನ್ನೊಡ್ಡಿ ಮಕ್ಕಳನ್ನು ವಿವಿಧ ರೀತಿಯ ಕೃತ್ಯಗಳಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಪೋಕೊ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದೆ. ಆದ್ದರಿಂದ ಇಲಾಖೆಯ ಜೊತೆಯಲ್ಲಿ ಪೋಷಕರು ಕೂಡ ಕೈಜೋಡಿಸಿದಾಗ ಮಾತ್ರ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.
ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಹೆಚ್ಚುವರಿ ಪೊಲೀಸ್ ಅಧೀಕ್ಷರಾದ ಶ್ರೀ ಪುರುಷೋತ್ತಮ ರವರು ಮಾತನಾಡಿ ದೇಶದ ವಿವಿಧ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ವಲಸೆ ಬಂದಿರುವ ಕುಟುಂಬಗಳಲ್ಲಿ ಸಾಕಷ್ಟು ಮಕ್ಕಳು ಬಾಲಕಾರ್ಮಿಕರಾಗಿ ದುಡಿಯುತ್ತಿರುವುದು ಕಂಡುಬರುತ್ತದೆ. ಇಂತಹ ಮಕ್ಕಳಿಗೆ ದೈಹಿಕವಾಗಿ ದುಡಿಯಲು ಅಸಮರ್ಥರಾಗಿರುವುದರ ಜೊತೆಗೆ ದುಶ್ಚಟಗಳಿಗೆ ಬಲಿಯಾಗುವುದನ್ನು ಸಹ ನಾವು ಕಾಣುತ್ತೇವೆ. ಇಂತಹ ಮಕ್ಕಳು ಕಂಡುಬಂದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಅಥವಾ ಮಕ್ಕಳ ಸಹಾಯವಾಣಿ-1098ಗೆ ಮಾಹಿತಿ ನೀಡುವಂತೆ ಮಕ್ಕಳ ರಕ್ಷಣೆಯಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಆಡಳಿತ ವಿಭಾಗದ ಉಪಕಾರ್ಯದರ್ಶಿ ಈಶ್ವರಪ್ಪ ಮಾತನಾಡಿ, ಕಿಶೋರಾವಸ್ಥೆಯ ಮಕ್ಕಳನ್ನು ಪೋಷಕರು ತಮ್ಮ ಕಣ್ಣುಗಳಂತೆ ಜೋಪಾನ ಮಾಡಿದಾಗ ಮಾತ್ರ ಮಕ್ಕಳ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು. ಅಲ್ಲದೇ ಪ್ರತಿಯೊಂದು ಗ್ರಾಮಪಂಚಾಯ್ತಿಗಳಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ರಚನೆಯಾಗಿರುತ್ತದೆ. ಗ್ರಾಮೀಣ ಭಾಗದಿಂದ ಇದನ್ನು ಪ್ರಾರಂಭ ಮಾಡಬೇಕು. ವಿವಿಧ ಭಾಗಗಳಿಂದ ವಲಸೆ ಬರುವ ಕುಟುಂಬಗಳನ್ನು ಕಾವಲು ಸಮಿತಿ ಸದಸ್ಯರು ಗುರುತಿಸಿ ಸಂಪೂರ್ಣ ವಿವರವನ್ನು ಪಡೆದುಕೊಳ್ಳಬೇಕು ತಿಳಿಸಿದರು.
ತಾಲ್ಲೂಕಿನ ಪ್ರತಿಯೊಂದು ಸರ್ಕಾರಿ ಕಟ್ಟಡದ ಮೇಲೆ, ಶಾಲೆಯ ಗೋಡೆಯ ಮೇಲೆ ಮಕ್ಕಳ ಸಹಾಯವಾಣಿ-1098ನ್ನು ಕಡ್ಡಾಯವಾಗಿ ಶಾಶ್ವತ ಫಲಕದಲ್ಲಿ ಬರೆಸಿರುವುದನ್ನು ಕೊಳ್ಳಬೇಕೆಂದು ತಿಳಿಸಿದರು. ಖಚಿತಪಡಿಸಿಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆರ್.ಜೆ. ಪವಿತ್ರ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆ ಯರು, ರಕ್ಷಣಾಧಿಕಾರಿ (ಸಾಂಸ್ಥಿಕ ಸೇವೆ), ಕಾನೂನು ಪರಿವೀಕ್ಷಣಾಧಿಕಾರಿ, ಸಮಾಜ ಕಾರ್ಯಕರ್ತರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತುಮಕೂರು ಹಾಗೂ ಮಕ್ಕಳ ಸಹಾಯವಾಣ- 1098ಯ ಸಿಬ್ಬಂದಿಗಳು, ತುಮಕೂರು ಇವರು ಹಾಜರಿದ್ದರು.
VK DIGITAL NEWS:
ಆ.5-ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಧರಣಿ;