ಬೆಂಗಳೂರು, ಆಗಸ್ಟ್ 19, (ಕರ್ನಾಟಕ ವಾರ್ತೆ):
ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷರಾದ ಶರವಣ ಟಿ.ಎ. ಅವರು 2023 -24 ಮತ್ತು 2024-25ನೇ ಸಾಲಿನ ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿಯ 50ನೇ ವರದಿಯನ್ನು ಸದನದಲ್ಲಿ ಮಂಡಿಸಿದರು.
ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಯ ಸದಸ್ಯರಾದ ಡಿ.ಟಿ. ಶ್ರೀನಿವಾಸ್ (ಡಿ.ಟಿ.ಎಸ್.) ಅವರು ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಯ 43ನೇ ವರದಿಯನ್ನು ಸದನದಲ್ಲಿ ಮಂಡಿಸಿದರು.
ಕರ್ನಾಟಕ ವಿಧಾನಮಂಡಲದ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರ್ ಅವರು ಕರ್ನಾಟಕ ವಿಧಾನಮಂಡಲದ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯ 40ನೇ ವರದಿಯನ್ನು ಸದನದಲ್ಲಿ ಮಂಡಿಸಿದರು.
ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರಾದ ಎ. ವಸಂತ ಕುಮಾರ್ ಅವರು ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ 53ನೇ ವರದಿಯನ್ನು ಸದನದಲ್ಲಿ ಮಂಡಿಸಿದರು.