ಶ್ರೇಷ್ಠ ಪುಸ್ತಕ ಪ್ರಸಸ್ತಿಗೆ ಅರ್ಜಿ ಆಹ್ವಾನ

varthajala
0

 ಬೆಂಗಳೂರು, ಆಗಸ್ಟ್ 28 (ಕರ್ನಾಟಕ ವಾರ್ತೆ): ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ವಿಷಯಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕೃಷಿ ವಿಜ್ಞಾನ ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳ ಮೇಲೆ ಕನ್ನಡದಲ್ಲಿ  ಜನವರಿ-2023 ರಿಂದ ಡಿಸೆಂಬರ್ 2025ರೊಳಗೆ ಪ್ರಕಟವಾಗುವ ಪುಸ್ತಕಗಳ ಲೇಖಕರಿಂದ “ಶ್ರೇಷ್ಠ ಪುಸ್ತಕ ಪ್ರಶಸ್ತಿ”ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು 05ನೇ ಜನವರಿ 2026ರೊಳಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ. ಯು.ಆರ್.ರಾವ್ ವಿಜ್ಞಾನ ಭವನ, ತೋಟಗಾರಿಕೆ ವಿಜ್ಞಾನಗಳ ಕಾಲೇಜು ಮಹಾದ್ವಾರ, ಜಿ.ಕೆ.ವಿ.ಕೆ.ಆವರಣ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ದೊಡ್ಡಬೆಟ್ಟಹಳ್ಳಿ ಬಡಾವಣೆ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು-560097 ಇಲ್ಲಿಗೆ ಸಲ್ಲಿಸಬೇಕು.
ಅರ್ಜಿ ನಮೂನೆ ಮತ್ತು ಮಾರ್ಗಸೂಚಿಗಳನ್ನು ಅಕಾಡೆಮಿಯ ಜಾಲತಾಣ https://kstacademy.in ನಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Post a Comment

0Comments

Post a Comment (0)