ಇ-ಪ್ರೊಕ್ಯೂರ್‍ಮೆಂಟ್ ಮುಖಾಂತರ ಅರ್ಜಿ ಆಹ್ವಾನ | ಮೂರು ದಿನಗಳ ಕಾಲ ಪುಸ್ತಕಗಳ ಪ್ರದರ್ಶನ

varthajala
0

ಬೆಂಗಳೂರು, ಆಗಸ್ಟ್ 16, (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಕ್ಕಳ ಸಹಾಯವಾಣಿ 3 ಹೆಲ್ಫ್ ಡೆಸ್ಕ್ ಬೆಂಗಳೂರು ಪೂರ್ವದಲ್ಲಿ ಒಟ್ಟು 18 ಹುದ್ದೆಗಳನ್ನು ಮಾನವ ಸಂಪನ್ಮೂಲ ಸೇವೆಯನ್ನು ಹೊರಗುತ್ತಿಗೆ ಮೂಲಕ ಪಡೆಯಲು ಇ-ಪ್ರೊಕ್ಯೂರಮೆಂಟ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಕರ್ನಾಟಕ ಸರ್ಕಾರದ ಇ-ಪ್ರೊಕ್ಯೂರ್‍ಮೆಂಟ್ ಪೋರ್ಟ್‍ಲ್ ಪದ್ಧತಿಯಂತೆ http/kppp.karnataka.gov.in  ಆನ್‍ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಎಂದು ಜಿಲ್ಲಾ ಮಕ್ಕಳ  ರಕ್ಷಣಾಧಿಕಾರಿಗಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೆಂಗಳೂರು ಪೂರ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂರು ದಿನಗಳ ಕಾಲ ಪುಸ್ತಕಗಳ ಪ್ರದರ್ಶನ

2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಬೆಂಗಳೂರಿನ ವಿಜಯನಗರದ ಎಂ.ಸಿ.ಬಡಾವಣೆಯ  ಡಾ.ಬಾಲಗಂಗಾಧರನಾಥ ಸ್ವಾಮಿಜಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹತ್ತಿರ ಡಾ. ವಿಷ್ಣುವರ್ಧನ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದಲ್ಲಿ ಆಗಸ್ಟ್ 20 ರಿಂದ 22 ವರೆಗೆ ಬೆಳಿಗ್ಗೆ 10.00 ರಿಂದ ಸಂಜೆ 5.30ರವರಗೆ ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ಆಯ್ಕೆಯಾದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರಾಜ್ಯದ ಎಲ್ಲಾ ಜಿಲ್ಲಾ/ ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು / ಮುಖ್ಯ ಗ್ರಂಥಾಲಯಗಳ ಕಛೇರಿಗಳಲ್ಲಿ ಪ್ರದರ್ಶಿಸಲಾಗುವುದು ಹಾಗೂ ಇಲಾಖೆಯ ಅಧಿಕೃತ ವೆಬ್‍ಸೈಟ್ www.dpl.karnataka.gov.in ನಲ್ಲಿಯೂ ಕೂಡ ಪ್ರಕಟಿಸಲಾಗುವುದು.

ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ, 2025 ನೇ ಆಗಸ್ಟ್ 30 ರ ಸಂಜೆ 5.30 ರ ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು – 560001 ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಲು ಕೋರಿದೆ. ನಂತರ ಬಂದ ಮನವಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಮುಖ್ಯ ಗ್ರಂಥಾಲಯಾಧಿಕಾರಿ ಅನಿತಾ.ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)