*ತಿರುಪತಿ 04.08.2025:* ಆಂಧ್ರಪ್ರದೇಶದ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕುಟುಂಬ ಸದಸ್ಯರೊಡನೆ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ನೀಡಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ಮತ್ತು ಅರ್ಚಕರು ರಾಜ್ಯಪಾಲರನ್ನು ಸ್ವಾಗತಿಸಿದರು. ಪೂಜೆಯ ನಂತರ ರಂಗಾನಾಯಕುಲ ಮಂಟಪದಲ್ಲಿ ಟಿಟಿಡಿ ಹೆಚ್ಚುವರಿ ಇಒ ಸಿ.ಎಚ್.ವೆಂಕಯ್ಯಚೌಧರಿ, ಟಿಟಿಡಿ ಓಎಸ್‌ಡಿ ಎಂ.ಎಸ್. ನಾಯಕ್ ಮತ್ತು ಇತರ ಟಿಟಿಡಿ ಅಧಿಕಾರಿಗಳು ಶ್ರೀವಾರಿ ವಸ್ತ್ರವನ್ನು ನೀಡಿ ರಾಜ್ಯಪಾಲರನ್ನು ಗೌರವಿಸಿದರು. ನಂತರ ತಿಮ್ಮಪ್ಪಸ್ವಾಮಿ ಪ್ರಸಾದವನ್ನು ಗೌರವಾನ್ವಿತ ರಾಜ್ಯಪಾಲರಿಗೆ ದೇವಾಲಯದ ವತಿಯಿಂದ ನೀಡಲಾಯಿತು.
VK DIGITAL NEWS: