ಗೌರವ ಧನ ಆಧಾರದ ಮೇರೆಗೆ ವಿವಿಧ ಹುದ್ದೆ ಭರ್ತಿ ಮಾಡಲು ಅರ್ಜಿ ಆಹ್ವಾನ

varthajala
0

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 02 (ಕರ್ನಾಟಕ ವಾರ್ತೆ) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ತಾಲ್ಲೂಕು ಮಟ್ಟದ ಕಚೇರಿಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಆನೇಕಲ್ ತಾಲ್ಲೂಕು ಕಾರ್ಯಕ್ರಮ ಸಂಯೋಜಕರು- 01  ಮತ್ತು ಬೆಂಗಳೂರು ರಾಜ್ಯ ಯೋಜನೆಯ ತಾಲ್ಲೂಕು ಕಾರ್ಯಕ್ರಮ ಸಂಯೋಜಕರು-01 ಹುದ್ದೆಗಳಿಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳನ್ನು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪಡದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್.ಮರಿಗೌಡ ರಸ್ತೆ, ಬೆಂಗಳೂರು ಇಲ್ಲಿ ಕಚೇರಿ ಸಮಯದಲ್ಲಿ ಸೆಪ್ಟೆಂಬರ್ 1 2025 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ: 080-29578688 ಮೂಲಕ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


VK DIGITAL NEWS:ಮಹಾ ಮಹಿಮರು ಶ್ರೀ ರಾಘವೇಂದ್ರ ತೀರ್ಥರು




Post a Comment

0Comments

Post a Comment (0)