ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 02 (ಕರ್ನಾಟಕ ವಾರ್ತೆ) : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ) ವತಿಯಿಂದ 2025-26 ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು 18 ವರ್ಷ ಮೇಲ್ಪಟ್ಟು 35 ವರ್ಷದೊಳಗಿರಬೇಕು. ಅರ್ಜಿಯನ್ನು www.kacdc.karnataka.gov.in ಮೂಲಕ ಅಕ್ಟೋಬರ್ 31 2025 ರೊಳಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 9448451111 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ)ದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.