ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ರೈತ-ರೈತ ಮಹಿಳೆಯರಿಂದ ಅನ್‍ಲೈನ್ ಅರ್ಜಿ ಆಹ್ವಾನ

varthajala
0

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ಭಾಗವಹಿಸಲು ಇಚ್ಚಿಸುವ ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಅನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಗೆ ಅನ್ವಯಿಸುವಂತೆ ನಿಗದಿತ ನಮೂನೆಯಲ್ಲಿ ಒಂದೇ ಅರ್ಜಿಯನ್ನು ಸಲ್ಲಿಸಬೇಕು.


ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್‍ಐಡಿ (ಫ್ರೂಟ್ಸ್ ಐಡಿಂಟಿಫಿಕೇಶನ್) ಸಂಖ್ಯೆಯನ್ನು ಬಳಸಿಕೊಂಡು ಸಿಟಿಜನ್ ಲಾಗಿನ್‍ಗೆ ಅಥವಾ ಆರ್‍ಎಸ್‍ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ/ಸಾರ್ವಜನಿಕ ಸಂಪರ್ಕ ಮೂಲಕ ಅರ್ಜಿಗಳನ್ನು 2025ನೇ ಆಗಸ್ಟ್ 30ರೊಳಗೆ ಸಲ್ಲಿಸಬೇಕು. ಸ್ಪರ್ಧಿಸಬಹುದಾದ ಬೆಳೆಗಳ ವಿವರಗಳು ಅರ್ಜಿ ನಮೂನೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

Post a Comment

0Comments

Post a Comment (0)