ಬೆಂಗಳೂರು, ಆಗಸ್ಟ್ 21, (ಕರ್ನಾಟಕ ವಾರ್ತೆ) :
ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಸಭಾ ನಾಯಕರಾದ ಎನ್.ಎಸ್. ಭೋಸರಾಜು ಅವರು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾರ್ಚ್ 2023ಕ್ಕೆ ಕೊನೆಗೊಂಡ ವರ್ಷಕ್ಕೆ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿ (2025ರ ವರದಿ ಸಂಖ್ಯೆ – 6) ಯನ್ನು ಸದನದಲ್ಲಿ ಮಂಡಿಸಿದರು.
ಇದೇ ಸಮಯದಲ್ಲಿ 2025-26ನೇ ಸಾಲಿನ ಪೂರಕ ಅಂದಾಜುಗಳ ಮೊದಲನೇ ಕಂತನ್ನು ಸದನದಲ್ಲಿ ಒಪ್ಪಿಸಿದರು.