ಬೆಂಗಳೂರು, ಆಗಸ್ಟ್ 29, (ಕರ್ನಾಟಕ ವಾರ್ತೆ): ಆನೇಕಲ್ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಯೋಜನೆಗಳನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್.ಎಸ್.ಪಿ) ಮೂಲಕ ಅನುμÁ್ಠನಗೊಳಿಸಲಾಗುತ್ತಿದ್ದು, ನೇರನಗದು ವರ್ಗಾವಣೆ (ಡಿ.ಬಿ.ಟಿ) ತಂತ್ರಾಂಶದ ಮೂಲಕ ಅರ್ಹ ವಿದ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಖಾತೆಗೆ ನೇರವಾಗಿ ವಿದ್ಯಾರ್ಥಿವೇತನ ಪಾವತಿಸಲಾಗುತ್ತಿದ್ದು ಆಧಾರ್ ಸೀಡಿಂಗ್ ಆಗದೇ ಇರುವ ಕೆಲವು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಮಾಡಲು ತೊಂದರೆಯಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಆಧಾರ್ ಸೀಡಿಂಗ್ ಮಾಡಿಸಿಕೊಳ್ಳುವಂತಾಗಿಸಲು ಆಗಸ್ಟ್ 25 ರಿಂದ ಸೆಪ್ಟೆಂಬರ್ 7 ರವರೆಗೆ ವಿಶೇಷ ಆಧಾರ್ ಸೀಡಿಂಗ್ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಧಾರ್ ಸೀಡಿಂಗ್ ಆಗದೇ ಇರುವ ಸೀಡಿಂಗ್ ಮಾಡಿಕೊಂಡು www.npci.org.in ಭೇಟಿ ನೀಡಿ ಆಧಾರ್ ಸೀಡಿಂಗ್ ಮಾಡಿಕೊಂಡು ವಿದ್ಯಾರ್ಥಿವೇತನ ಸೌಲಭ್ಯವನ್ನು ಪಡೆಯುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ ಆನೇಕಲ್ ತಾಲ್ಲೂಕು ಕಛೇರಿಯನ್ನು ಅಥವಾ ದೂರವಾಣಿ ಸಂಖ್ಯೆ 9480843052 ಗೆ ಸಂಪರ್ಕಿಸುವಂತೆ ಆನೇಕಲ್ ತಾಲ್ಲೂಕು ಸಮಾಜಕಲ್ಯಾಣ ಇಲಾಖೆಯ ಸಹಾಯಕನಿರ್ದೇಶಕರು (ಗ್ರೇಡ್-1) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.