“ನನ್ನ ಮತ, ನನ್ನ ಹಕ್ಕು” ಘೋಷವಾಕ್ಯದೊಂದಿಗೆ ಸೆಪ್ಟೆಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

varthajala
0

 ಬೆಂಗಳೂರು, ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ): “ನನ್ನ ಮತ, ನನ್ನ ಹಕ್ಕು” ಘೋಷವಾಕ್ಯದೊಂದಿಗೆ 2025ನೇ  ಸೆಪ್ಟೆಂಬರ್ 15 ರಂದು ಕರ್ನಾಟಕ ಸರ್ಕಾರವು ಅಂತಾರಾಷ್ಟ್ರೀಯ ಪುಜಾಪ್ರಭುತ್ವ ದಿನವನ್ನು ಆಚರಿಸುತ್ತಿದೆ. ಪ್ರಜಾಪ್ರಭುತ್ವವನ್ನು ರೂಪಿಸುವಲ್ಲಿ ಶ್ರೀ ಸಾಮಾನ್ಯನ ಧ್ವನಿ ಎಷ್ಟು ಮುಖ್ಯ ಎಂಬುದನ್ನು ಈ ಕಾರ್ಯಕ್ರಮ ಪತಿಬಿಂಬಿಸುವ ಜೊತೆಗೆ ಸಂವಿಧಾನ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯಲಿದೆ.


ಪ್ರತಿವರ್ಷ ಸೆಪ್ಟೆಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ವಿಶ್ವಸಂಸ್ಥೆಯು ಆಚರಿಸುತ್ತಿದೆ. ಈ ವಿಶೇಷ ದಿನವು ಎಲ್ಲರನ್ನೂ ಒಳಗೊಳ್ಳುವ, ಹೊಣೆಗಾರಿಕೆ ಹಾಗೂ ಪಾರದರ್ಶಕ ಆಡಳಿತವನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. 2007ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಘೋಷಿಸಿದ ಈ ವಿಶೇಷ ದಿನವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವ ಜಾಗತಿಕ ಕರೆಯಾಗಿದೆ. ಸಾರ್ವಜನಿಕರ ಪಾಲ್ಗೊಳ್ಳುವಿಕೆ, ಮಾನವ ಹಕ್ಕುಗಳಿಗೆ ಗೌರವ ಮತ್ತು ಆಡಳಿತವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಕರ್ನಾಟಕವು ಸೃಜನಶೀಲ, ಪ್ರಶಂಸನೀಯ ಕ್ರಮಗಳ ಮೂಲಕ ಪ್ರಜಾಪ್ರಭುತ್ವದ ಬಗ್ಗೆ ಜಾಗೃತಿಯ ಜೊತೆಗೆ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಮುಂಚೂಣಿಯಲ್ಲಿದೆ.

2023ರಲ್ಲಿ ಕರ್ನಾಟಕವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಇತಿಹಾಸ ನೆನಪಿಟ್ಟುಕೊಳ್ಳುವಂತೆ ಆಚರಿಸಿತು. ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ ಸ್ಮರಣೀಯವಾಯಿತು. 54 ದೇಶಗಳು, ಭಾರತದ 30 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 84 ದೇಶಗಳ507 ಜಿಲ್ಲೆಗಳಾಧ್ಯಂತ 2.31 ಕೋಟಿ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಾಗಾಗಿ ಈ ವಿಶಿಷ್ಟ ಆಚರಣೆಯು ಲಂಡನ್ನ ವಲ್ರ್ಡ್ ಬುಕ್ ಆಫ್ ರೆಕಾಡ್ರ್ನಲ್ಲಿ ಮಾನ್ಯತೆ ಪಡೆಯಿತು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳು ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ದೇಶವ್ಯಾಪಿಯಾಗಿ ಸಾವಿರಾರು ಮಕ್ಕಳು ಮತ್ತು ನಾಗರಿಕರು ಪಾಲ್ಗೊಂಡಿದ್ದರು.

2024ರಲ್ಲಿ 2500 ಕಿ.ಮೀ ಉದ್ದದ ಮಾನವ ಸರಪಳಿಯೋಂದಿಗೆ ಪ್ರಜಾಪ್ರಭುತ್ವ ದಿನ ಆಚರಣೆ :

2024ರ ಸೆಪ್ಟೆಂಬರ್ 15 ರಂದು ರಾಜ್ಯವು ಬೀದರ್‍ನಿಂದ ಚಾಮರಾಜನಗರದವರೆಗೆ 2,500 ಕಿಮೀ ಉದ್ದದ ಮಾನವ ಸರಪಳಿಯೊಂದಿಗೆ ಪ್ರಜಾಪ್ರಭುತ್ವ ದಿನವನ್ನು ಆಚರಿಸಿತು. ಸ್ವಾತಂತ್ರ ಸಮಾನತೆ ಮತ್ತು ಬಾಂಧವ್ಯವನ್ನು ಪ್ರತಿಬಿಂಬಿಸಿತು. ಅರಣ್ಯ ಇಲಾಖೆಯ ಸಹಯೋಗದಲ್ಲಿ 10 ಲಕ್ಷ ಗಿಡಗಳನ್ನು ನೆಡಲಾಯಿತು. ವಿದ್ಯಾರ್ಥಿಗಳು, ಸ್ವಯಂಸೇವಾ ಸಂಸ್ಥೆಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಹಾಗೂ ನಾಗರಿಕರು ಸಕ್ರಿಯವಾಗಿ, ಸ್ವಯಂಪ್ರೇರಿತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

2025 ನೇ ಸೆಪ್ಟೆಂಬರ್ 15ರಂದು “ನನ್ನ ಮತ, ನನ್ನ ಹಕ್ಕು” ಘೋಷವಾಕ್ಯದೊಂದಿಗೆ ಪ್ರಜಾಪ್ರಭುತ್ವ ದಿನ ಆಚರಣೆ :

ಕರ್ನಾಟಕ ಸರ್ಕಾರವು 2025ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು "ನನ್ನ ಮತ, ನನ್ನ ಹಕ್ಕು” ಎಂಬ ವಿಷಯದೊಂದಿಗೆ ಆಚರಿಸುತ್ತಿದೆ. ಈ ವಿಷಯವು ಮತದಾರರ ಪಾತ್ರವನ್ನು ಒತ್ತಿ ಹೇಳುತ್ತದೆ. ಮತದಾನವು ಬರೀ ಹಕ್ಕು ಮಾತ್ರವಲ್ಲ ಬದಲಾಗಿ ಅದೊಂದು ಹೊಣೆಗಾರಿಕೆಯೂ ಆಗಿದೆ ಎಂಬ ಸಂದೇಶವನ್ನು ಪಸರಿಸುತ್ತದೆ. ಯುವಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ, ನಾಗರಿಕರು ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ.

ಜಿಲ್ಲಾ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳ ಆಯೋಜನೆ :

ಕರ್ನಾಟಕದಾದ್ಯಂತ ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು, ನಾಗರಿಕರ ಜವಾಬ್ದಾರಿ ಮತ್ತು ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲಿ ಪ್ರತಿ ಜಿಲ್ಲೆಗಳಲ್ಲೂ ಜಿಲ್ಲಾ ಆಡಳಿತಗಳ ಹಣಕಾಸಿನ ನೆರವಿನ ಮೂಲಕ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ.

ಪ್ರಜಾಪುಭುತ್ವ ಮತ್ತು ಏಕತೆಯ ಸಂದೇಶಗಳನ್ನು ಹೊತ್ತ ಬೈಕರ್ಗಳು, ಎಲ್ಲಾ ಜಿಲ್ಲಾ ಕೇಂದ್ರಗಳಿಂದ ಬೆಂಗಳೂರಿನವರೆಗೆ ಬೈಕ್ ಜಾಥಾ ನಡೆಸಲಿದ್ದಾರೆ. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಈ ಜಾಥಾ ನಡೆಯಲಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿ ಬೈಕ್ ಜಾಥಾಗೆ ಸಂಬಂಧಿಸಿದಂತೆ ಸಮನ್ವಯತೆ ಸಾಧಿಸಲಿದೆ.

ಪ್ರಜಾಪ್ರಭುತ್ವದ ಮೌಲ್ಯಗಳ ಸೃಜನಶೀಲ ಅಭಿವ್ಯಕ್ತಿತ್ವವನ್ನು ಉತ್ತೇಜಿಸು ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಹಾಗೂ ನೇತೃತ್ವದಲ್ಲಿ ಲಿಡಕರ್ ಪ್ರಾಯೋಜಕತ್ವದಲ್ಲಿ ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಗುತ್ತಿದ್ದು, ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ರೂ. 1,00,000, ದ್ವಿತೀಯ ಬಹುಮಾನ ರೂ. 50,000 ಹಾಗೂ ತೃತೀಯ ಬಹುಮಾನ 25,000 ಗಳನ್ನು ನೀಡಲಾಗುತ್ತದೆ. ಅದೇ ರೀತಿ ಜಿಲ್ಲಾ ಮಟ್ಟದಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ರೂ. 25,000, ದ್ವಿತೀಯ ಬಹುಮಾನ  ರೂ. 15,000 ಹಾಗೂ ತೃತೀಯ ಬಹುಮಾನ ರೂ 10,000 ನೀಡಲಾಗುತ್ತದೆ. ತಾಲ್ಲೂಕು ಮಟ್ಟದಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ರೂ. 15,000, ದ್ವಿತೀಯ ಬಹುಮಾನ ರೂ. 10,000, ತೃತೀಯ ಬಹುಮಾನ ರೂ. 5,000 ಗಳನ್ನು ನೀಡಲಾಗುತ್ತದೆ.

ಏಖಇIS ವತಿಯಿಂದ ವಿದ್ಯಾರ್ಥಿಗಳಿಗಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, “ನನ್ನ ಮತ ನನ್ನ ಹಕ್ಕು”, “ಸಂವಿಧಾನದ ಪೀಠಿಕೆ” ಮತ್ತು ಮಹಾತ್ಮ ಗಾಂಧೀಜಿ ಅವರ ದೃಷ್ಟಿಕೋನದಲ್ಲಿ “ಗಾಂದಿ ಭಾರತ” ಪ್ರಜಾಪ್ರಭುತ್ವದ ಆದರ್ಶಗಳನ್ನು ಬಿಂಬಿಸುವ ಮೂರು ವಿಷಯಗಳು ಭಾಷಣದ ವಿಷಯ ವಸ್ತುವಾಗಿದ್ದು, ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಗುತ್ತಿದ್ದು, ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ರೂ. 1,00,000, ದ್ವಿತೀಯ ಬಹುಮಾನ ರೂ. 50,000 ಹಾಗೂ ತೃತೀಯ ಬಹುಮಾನ 25,000 ಗಳನ್ನು ನೀಡಲಾಗುತ್ತದೆ. ಅದೇ ರೀತಿ ಜಿಲ್ಲಾ ಮಟ್ಟದಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ರೂ. 25,000, ದ್ವಿತೀಯ ಬಹುಮಾನ  ರೂ. 15,000 ಹಾಗೂ ತೃತೀಯ ಬಹುಮಾನ ರೂ 10,000 ನೀಡಲಾಗುತ್ತದೆ. ತಾಲ್ಲೂಕು ಮಟ್ಟದಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ರೂ. 15,000, ದ್ವಿತೀಯ ಬಹುಮಾನ ರೂ. 10,000, ತೃತೀಯ ಬಹುಮಾನ ರೂ. 5,000 ಗಳನ್ನು ನೀಡಲಾಗುತ್ತದೆ.

ದೈನಂದಿನ ಜೀವನದಲ್ಲಿ ಸಾಂವಿಧಾನಿಕ ಮೌಲ್ಯಗಳನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಶಾಲೆಗಳು, ಕಾಲೇಜುಗಳು, ಸರ್ಕಾರಿ ಕಚೇರಿಗಳು ಮತ್ತು ಸಮುದಾಯ ಸ್ಥಳಗಳಲ್ಲಿ ಸಾರ್ವಜನಿಕವಾಗಿ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸಮಾಜ ಕಲ್ಯಾಣ ಇಲಾಖೆಯು ಸಮನ್ವಯ ಇಲಾಖೆಯಾಗಿ ಕಾರ್ಯ ನಿರ್ವಹಿಸುತ್ತದೆ.

ರಾಜ್ಯ ಮಟ್ಟದ ಕಾರ್ಯಕ್ರಮಗಳು:
ರಾಜ್ಯ ಮಟ್ಟದ ಕಾರ್ಯಕ್ರಮವು 2025ನೇ ಸೆಪ್ಟೆಂಬರ್ 15 ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯಲಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾ ಕೇಂದ್ರಗಳಿಂದ ಆಗಮಿಸುವ ಬೈಕ್ ಜಾಥಾದ ಸ್ವಾಗತದೊಂದಿಗೆ ಕಾರ್ಯಕ್ರಮ ಆರಂಭವಾಗುವುದು.

ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಮತ್ತು ಇತರ ಸಚಿವರು ಉದ್ಘಾಟಿಸಲಿದ್ದಾರೆ.

ಕರ್ನಾಟಕದ ಕಲೆ, ಸಂಸ್ಕøತಿಯನ್ನು ಪ್ರತಿನಿಧಿಸುವ ನಗಾರಿ - ಡೋಲುಗಳ ನಾದದೊಂದಿಗೆ 1,000 ಕ್ಕೂ ಹೆಚ್ಚು ಶಾಲಾ ಮಕ್ಕಳು, ಸರ್ಕಾರೇತರ ಸಂಸ್ಥೆಗಳು, ಸಮುದಾಯ ಮುಖಂಡರು ಮತ್ತು ದಲಿತ ಸಂಘಟನೆಗಳು ಭಾಗವಹಿಸಲಿದ್ದು, ಇದು ನಿಜವಾಗಿಯೂ ಎಲ್ಲರನ್ನೂ ಒಳಗೊಂಡ ಮತ್ತು ಪ್ರಾತಿನಿಧಿಕ ಕಾರ್ಯಕ್ರಮವಾಗಲಿದೆ.

ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳು ಸಭೆಯನ್ನುದೇಶಿಸಿ ಮಾತನಾಡಲಿದ್ದು, ಸಂವಿಧಾನದ ಮಹತ್ವ ಮತ್ತು ಅದರ ಆದರ್ಶಗಳನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ಹೇಗೆ ಜನಕೇಂದ್ರಿತ ಆಡಳಿತವಾಗಿ ಪರಿವರ್ತಿಸಲಾಗುತ್ತಿದೆ ಹಾಗೂ ಇದರ ಬಗ್ಗೆ ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಲಿದ್ದಾರೆ. ಅವರ ಸಂದೇಶವು ನಾಗರಿಕರು ದೈನಂದಿನ ಜೀವನದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಸಕ್ರಿಯವಾಗಿ ರಕ್ಷಿಸಲು ಮತ್ತು ಬಲಪಡಿಸಲು ಒಂದು ಕರೆಯಾಗಿರುತ್ತದೆ.

ಸಮಾರಂಭದಲ್ಲಿ "Hon'ble Chief Minister Reward for meritorious KREIS PU students" ಯೋಜನೆಯಡಿಯಲ್ಲಿ, KCET, NEET ಮತ್ತು JEE ಪರೀಕ್ಷೆಗಳಲ್ಲಿ ಉತ್ತಮ ಸ್ಥಾನಗಳನ್ನು ಗಳಿಸಿದ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸಳಿಗೆ ಪ್ರವೇಶ ಪಡೆದ 1,000 ಪ್ರತಿಭಾನ್ವಿತ ಏKREIS PU ವಿದ್ಯಾರ್ಥಿಗಳಿಗೆ ರೂ. 6.00 ಕೋಟಿ ವೆಚ್ಚದಲ್ಲಿ ನೇರ ನಗದು ವರ್ಗಾವಣೆ ಮೂಲಕ ಪೆÇ್ರೀತ್ಸಾಹ ಧನ ವಿತರಿಸಲಾಗುವುದು. ಈ ಕಾರ್ಯಕ್ರಮವು ಯುವಜನರನ್ನು ಸಬಲೀಕರಣಗೊಳಿಸಲು ಮತ್ತು ಉನ್ನತ ಶಿಕ್ಷಣದಲ್ಲಿ ಸಮಾನ ಅವಕಾಶಗಳನ್ನು ಬೆಳೆಸಲು ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ವಿದ್ಯಾರ್ಥಿಗಳು ಮತ್ತು ಯುವಕರು ಪ್ರಜಾಪ್ರಭುತ್ವ ಮೌಲ್ಯಗಳನ್ನು ಸೃಜನಶೀಲವಾಗಿ ವ್ಯಕ್ತಪಡಿಸಲು ಮತ್ತು ಜಾಗೃತಿ ಮೂಡಿಸುವುದನ್ನು ಪೆÇ್ರೀತ್ಸಾಹಿಸಲು ಚಿತ್ರಕಲೆ, ಛಾಯಾಚಿತ್ರ ಮತ್ತು ಚರ್ಚಾ ಸ್ಪರ್ಧೆಗಳಿಗೆ ಚಾಲನೆ ನಿಡಲಾಗುವುದು. ಚರ್ಚೆಗಳು, ಸಂಗೀತ ಮತ್ತು ಯುವ ಧ್ವನಿಗಳ ಮೂಲಕ ಸಂವಿಧಾನದ ಮಹತ್ವ, ಚುನಾವಣಾ ಜಾಗೃತಿ ಮತ್ತು ನಾಗರಿಕರ ಭಾಗವಹಿಸುವಿಕೆಯ ಕುರಿತು ಸಂದೇಶಗಳನ್ನು ನೀಡಲು “ಡೆಮಾಕ್ರಸಿ ರೇಡಿಯೋ” ಎನ್ನುವ ಅಂತರ್ಜಾಲ ಆಧಾರಿತ ಹೊಸ ರೇಡಿಯೋ ವೇದಿಕೆ ಆರಂಭ.

ಅನುದಾನಗಳ ವಿತರಣೆ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗಿ ಪರಿಶಿಷ್ಟ ಜಾತಿಯ ಯುವಕರಿಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದರಿಂದಾಗಿ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮಗಳನ್ನು ಪ್ರಾರಂಭಿಸಲು, ಸ್ವಯಂ ಉದ್ಯೋಗ ಮತ್ತು ಸಮಗ್ರ ಮಾಧ್ಯಮ ಪ್ರಾತಿನಿಧ್ಯವನ್ನು ಬೆಳೆಸಲು ನೆರವಾಗುತ್ತಿದೆ.

ಈ ಕಾರ್ಯಕ್ರಮವನ್ನು ಸುಮಾರು ರೂ. 1.5 ಕೋಟಿ ರೂ ವೆಚ್ಚದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬುಡಕಟ್ಟು ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು ಹಾಗೂ ಒಟ್ಟಾರೆ ಸಮಾಜ ಕಲ್ಯಾಣ ಇಲಾಖೆಯ ಸಮನ್ವಯದೊಂದಿಗೆ ಆಯೋಜಿಸಲಾಗುತ್ತಿದ್ದು,  ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಮತ್ತು ಕರ್ನಾಟಕ ಹಾಲು ಒಕ್ಕೂಟ ಸರ್ಕಾರಿ ನಿಗಮಗಳು ಮತ್ತು ಪ್ರಾಧಿಕಾರಗಳು ಕಾರ್ಯಕ್ರಮದಲ್ಲಿ ಪ್ರಮುಕವಾಗಿ ಪಾಲ್ಗೊಳ್ಳಲಿವೆ.

ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳು, ಯುವಕರು, ಕಾರ್ಮಿಕರು, ರೈತರು, ವೃತ್ತಿಪರರು, ಹಿರಿಯರು ಮತ್ತು ನಾಗರಿಕರಿಗೆ ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸುತ್ತಿದೆ. ಸೆಪ್ಟೆಂಬರ್ 15ರಂದು ನಾವೆಲ್ಲಾ ಒಟ್ಟಾಗಿ ನಮ್ಮ ಸಂವಿಧಾನದ ಮಹತ್ವ, ಎಲ್ಲರನ್ನೂ ಒಳಗೊಳ್ಳುವಿಕೆ ಮತ್ತು ಭಾವಹಿಸುವಿಕೆ ಹಾಗೂ ಸಮಾನ ಹಂಚಿಕೆಯ ಸಂದೇಶವನ್ನು ಪ್ರಪಂಚಕ್ಕೆ ಸಾರಿ ಹೇಳೋಣ: ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ನಾವು ಪಾಲಿಸುವ ಒಂದು ಆದರ್ಶ ಮಾತ್ರವಲ್ಲ, ಬದಲಾಗಿ ನಮ್ಮ ಬದುಕಿನ ಭರವಸೆಯಾಗಿದೆ ಎಂಬುದನ್ನು ಒತ್ತಿ ಹೇಳೋಣ.

ಸರ್ಕಾರವು ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆಯನ್ನು ಪೆÇ್ರೀತ್ಸಾಹಿಸುತ್ತಿದ್ದು, ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಸಂಬಂಧಿಸಿದಂತೆ ಆಯೋಜಿಸಲಾದ ಸ್ಪರ್ಧೆಗಳು ಮತ್ತು ಸ್ಥಳೀಯ ಕಾರ್ಯಕ್ರಮಗಳ ಕುರಿತು ವಿವರವಾದ ಮಾಹಿತಿಗಾಗಿ, https://www.democracydaykarnataka.in ಅಥವಾ ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿ 9482300400 ಸಂಪರ್ಕಿಸಿ ನಿಮ್ಮ ಬೆಂಬಲ ಸೂಚಿಸುವುದು. ಅಲ್ಲದೇ ಅಪ್‍ಡೇಟ್‍ಗಳನ್ನು  ಪಡೆಯಲು Twitter (X):@ConstitutionGok, Instagram: constitutiongok ನಲ್ಲಿ ಅನುಸರಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)