71 ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

varthajala
0

 ಬೆಂಗಳೂರು, ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ವತಿಯಿಂದ 2025-26 ನೇ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ 71 ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮಗಳನ್ನು ಅಕ್ಟೋಬರ್ 02 ರಿಂದ 08 ರವರೆಗೆ ಆಯೋಜಿಸಲಾಗಿದೆ.


ಪ್ರತಿ ವರ್ಷವು ಅಕ್ಟೋಬರ್ ಮೊದಲನೇ ವಾರದಲ್ಲಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಅದರಂತೆ ಈ ವರ್ಷ ಅರಣ್ಯ ಇಲಾಖೆಯಲ್ಲಿ 71ನೇ ವನ್ಯಜೀವಿ ಸಪ್ತಾಹ ಹಮ್ಮಿಕೊಂಡಿರುವ ಪ್ರಯುಕ್ತ ಅಕ್ಟೋಬರ್ 02 ರಂದು ಬೆಳಿಗ್ಗೆ 7:30 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿನ ಭವ್ಯ ಮೆಟ್ಟಿಲುಗಳ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವರಾದ ಈಶ್ವರ್ ಬಿ ಖಂಡ್ರೆ ಅವರು “ವನ್ಯಜೀವಿ ಸಂರಕ್ಷಣೆಗಾಗಿ ಕಾಲ್ನಡಿಗೆ” ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಅಕ್ಟೋಬರ್ 02 ರಿಂದ 08 ರವರೆಗೆ  ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಅಕ್ಟೋಬರ್ 02 ರಂದು ವಿಧಾನಸೌಧದ ಮುಂಭಾಗದಿಂದ ಲಾಲ್‍ಬಾಗ್ ವರೆಗೆ ಕಾಲ್ನಡಿಗೆ, ಅಕ್ಟೋಬರ್ 03 ರಂದು ಸ್ತಬ್ಧ ಚಿತ್ರ ಸಂಚಾರ ಮತ್ತು ಕಾಡಂಚಿನ ಗ್ರಾಮಗಳಲ್ಲಿ ಬೀದಿ ನಾಟಕ ಪ್ರದರ್ಶನ, ಅಕ್ಟೋಬರ್ 04 ರಂದು ವಿಶೇಷ ಚೇತನ ಮಕ್ಕಳಿಗೆ ವಿವಿಧ ಸ್ಪರ್ಧೆಗಳು, ಅಕ್ಟೋಬರ್ 05 ರಂದು ಅರಣ್ಯ ಭವನದಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದವರೆಗೆ ಸೈಕಲ್ ಜಾಥಾ, ಅಕ್ಟೋಬರ್ 6 ರಂದು ಅರಣ್ಯದಲ್ಲಿ ಪಕ್ಷಿಗಳ ವೀಕ್ಷಣೆ ಕಾರ್ಯಕ್ರಮವಿರಲಿದೆ ಎಂದು ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)