ಕಲಬುರಗಿ / ಬೆಂಗಳೂರು, ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): ಅಭಿವೃದ್ಧಿ ಸಾಧ್ಯವಾಗಬೇಕಾದರೆ ವಿಶೇಷ ಸ್ಥಾನಮಾನದ ಅಗತ್ಯವಿದೆಯೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಇಂದು ಕಲಬುರಗಿಯ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2025 ರ ಅಂಗವಾಗಿ ಧ್ವಜಾರೋಹಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ಹಾಗೂ ವಿವಿಧ ಇಲಾಖೆಗಳ ಫಲನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ಈ ಭಾಗದ ಹೋರಾಟಗಾರರು ನಿರಂತರವಾಗಿ ಹೋರಾಟ ನಡೆಸಿದ್ದರು. ಕೇಂದ್ರದ ಅಟಲ್ ಬಿಹಾರಿ ವಾಜಪೇಯಿಯವರ ನೇತೃತ್ವದ ಸರ್ಕಾರವು ಕಲ್ಯಾಣ ಕರ್ನಾಟಕಕ್ಕೆ ನೀಡಬೇಕಾದ ವಿಶೇಷ ಸ್ಥಾನಮಾನವನ್ನು ಕೊಡಲಾಗುವುದಿಲ್ಲವೆಂದು ಬಹುಕಾಲದ ಜನರ ಬೇಡಿಕೆಯನ್ನು ತಿರಸ್ಕರಿಸಿತ್ತು. ಆದರೆ ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸದೆ ದೇಶದ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ಸಾಧ್ಯವಿಲ್ಲ ಎಂಬುವುದನ್ನು ಅರಿತು ಡಾ. ಮನಮೋಹನ್ ಸಿಂಗ್‍ರವರ ನೇತೃತ್ವದ ಯು.ಪಿ.ಎ. ಸರ್ಕಾರವು ಸಂವಿಧಾನಕ್ಕೆ ತಿದ್ದುಪಡಿ ತಂದು ಆರ್ಟಿಕಲ್ 371ಜೆ ಅನ್ನು ದಿನಾಂಕ 1-1-2013 ರಿಂದ ಜಾರಿಗೆ ಬರುವಂತೆ ಅಧಿಸೂಚನೆಗಳನ್ನು ಹೊರಡಿಸಿತು ಎಂದು ಹೇಳಿದರು.
ಸ್ವತಂತ್ರ ಭಾರತವು ಅಭಿವೃದ್ಧಿ ಮಾರ್ಗದ ಕಡೆಗೆ ಮುನ್ನಡೆಯುತ್ತಿದ್ದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಅಭಿವೃದ್ಧಿ ಕಾಣದೆ ಅಂಧಕಾರದಲ್ಲೆ ಉಳಿದು ಬಿಟ್ಟಿದ್ದವು. ಸಂವಿಧಾನಬದ್ಧವಾಗಿ ನಾವೂ ಅಭಿವೃದ್ಧಿ ಹೊಂದಬೇಕೆಂಬ ಸಂಕಲ್ಪ ಮೂಡಿದ ಕಾರಣದಿಂದಲೇ ಹೋರಾಟಗಳು ಹುಟ್ಟಿಕೊಂಡವು. ಹಿಂದುಳಿದಿದ್ದ ಈ ಭಾಗವನ್ನು ಅಭಿವೃದ್ಧಿ ಮಾಡಬೇಕೆಂಬ ಉದ್ದೇಶದಿಂದ ಸನ್ಮಾನ್ಯ ದಿವಂಗತ ಡಾ. ಧರ್ಮಸಿಂಗ್‍ರವರ ನೇತೃತ್ವದ ಸಮಿತಿಯ ವರದಿ ಆಧರಿಸಿ, 1990ರಲ್ಲಿ ಹೈದ್ರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಯಿತು ಎಂದರು.
1947ರ ಆಗಸ್ಟ್ 15ರಂದು ದೇಶ ಸ್ವಾತಂತ್ರ್ಯ ಪಡೆದ ಸಂಭ್ರಮದಲ್ಲಿದ್ದರೆ ಈ ಭಾಗಕ್ಕೆ ಸ್ವಾತಂತ್ರ್ಯ ದೊರೆತಿರಲಿಲ್ಲ. ರಜಾಕಾರರ ದೌರ್ಜನ್ಯ ಮಿತಿ ಮೀರಿತ್ತು. ತ್ಯಾಗ ಬಲಿದಾನಗಳಿಗೆ ಹೆಸರುವಾಸಿಯಾದ ಈ ನೆಲದ ಅಪ್ರತಿಮ ಹೋರಾಟಗಾರರ ಛಲ ಮತ್ತು ಜವಾಹರ್ ಲಾಲ್ ನೆಹರೂ ಹಾಗೂ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ದೃಢ ನಿಶ್ಚಯದಿಂದಾಗಿ ಒಕ್ಕೂಟ ವ್ಯವಸ್ಥೆಗೆ ಸೇರುವಂತಾಯಿತು ಎಂದರು.
ಸ್ವಾತಂತ್ರ್ಯ ಹೋರಾಟದ ಜೊತೆಗೆ ಹೈದ್ರಾಬಾದ್ ಕರ್ನಾಟಕ ವಿಮೋಚನೆಗಾಗಿ ಹಾಗೂ ಹೈದ್ರಾಬಾದ್ ಕರ್ನಾಟಕ ಭಾಗವನ್ನು ಭಾರತದಲ್ಲಿ ವಿಲೀನಗೊಳಿಸಲು ನಡೆದ ಹೋರಾಟದಲ್ಲಿ ಭಾಗವಹಿಸಿದ್ದ ಶರಣಗೌಡ ಇನಾಂದಾರ, ರಾಜಾ ವೆಂಕಟಪ್ಪ ನಾಯಕ, ದತ್ತಾತ್ರೇಯ ಅವರಾದಿ, ಶಿವಮೂರ್ತಿಸ್ವಾಮಿ ಅಳವಂಡಿ, ಮಟಮಾರಿ ನಾಗಪ್ಪ, ನಾರಾಯಣರಾವ್ ಕನಿಹಾಳ, ಹಕೀಕತ್‍ರಾವ್ ಚಿಟಗುಪ್ಪಕರ, ಚಂದ್ರಶೇಖರ್ ಪಾಟೀಲ್, ರಾಮಾಚಾರ್, ಡಾ. ಚರ್ಚಿಹಾಳ್ ಮಠ, ರಾಮಚಂದ್ರಪ್ಪ ವೀರಪ್ಪ, ಕಪತಪ್ಪ ಬೇಳೆ, ಎ.ವಿ.ಪಾಟೀಲ್, ಆರ್.ವಿ. ಬಿಡ್ಡಪ್ಪ, ಅಮರ್ ಸಿಂಗ್ ರಾಠೋಡ್ ಮುಂತಾದ ಎಲ್ಲಾ ಹೋರಾಟಗಾರರ ತ್ಯಾಗ ಬಲಿದಾನ ಅವಿಸ್ಮರಣೀಯ. ಇಂತಹ ಅಸಂಖ್ಯಾತ ಹೋರಾಟಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ಕಲ್ಯಾಣ ಕರ್ನಾಟಕವು ಸಾಹಿತ್ಯ, ಕಲೆ, ಸಂಸ್ಕøತಿ, ಧಾರ್ಮಿಕ ಸುಧಾರಣೆ ಮೊದಲಾದ ಕ್ಷೇತ್ರಗಳಲ್ಲಿ ಇಡೀ ದೇಶಕ್ಕೆ ಬೆಳಕು ಚೆಲ್ಲಿದಂತಹ ಶ್ರೇಷ್ಠ ವ್ಯಕ್ತಿಗಳನ್ನು ಜಗತ್ತಿಗೆ ನೀಡಿದೆ. ಕನ್ನಡದ ಮೊಟ್ಟ ಮೊದಲ ಉಪಲಬ್ಧ ಗ್ರಂಥ ಕವಿರಾಜಮಾರ್ಗದಲ್ಲಿ `ನಿಜವಾದ ಒಡವೆ ಎಂದರೆ ಪರಧರ್ಮ ಮತ್ತು ಪರರ ವಿಚಾರಗಳನ್ನು ಸಹನೆಯಿಂದ ನೋಡುವುದು’ ಎಂಬ ಶಾಶ್ವತ ಸೌಹಾರ್ದ ತತ್ವವನ್ನು ಜಗತ್ತಿಗೆ ನೀಡಲಾಗಿದೆ.
ವಿಶ್ವಗುರು-ಸಾಂಸ್ಕøತಿಕ ನಾಯಕ ಬಸವಣ್ಣನವರ ನೇತೃತ್ವದ ಶರಣರ ಚಳುವಳಿಯು ಇದೇ ಪುಣ್ಯಭೂಮಿಯಲ್ಲಿ ನಡೆದಿತ್ತು ಎಂಬುದು ಇಡೀ ಜಗತ್ತು ಹೆಮ್ಮೆ ಪಡುವ ಸಂಗತಿಯಾಗಿದೆ. ಉದಾತ್ತ ಪರಂಪರೆಗೆ ನಾಂದಿ ಹಾಡಿದ್ದ ಅಸಂಖ್ಯಾತ ಅನುಭಾವಿಗಳು, ಅವಧೂತರು, ಆರೂಢರು, ಸೂಫಿಸಂತರ ಕರ್ಮಭೂಮಿ ಇದು.
ವಿಶೇಷ ಸ್ಥಾನಮಾನಕ್ಕಾಗಿ ನಡೆದ ಹೋರಾಟಗಳ ಮುಖಂಡತ್ವ ವಹಿಸಿದ್ದ ಮಾನ್ಯ ಮಲ್ಲಿಕಾರ್ಜುನ ಖರ್ಗೆ ಯವರು, ಮಾನ್ಯ ದಿವಂಗತ ಧರ್ಮಸಿಂಗ್ ರವರು ಮುಂತಾದ ಅನೇಕ ಮಹನೀಯರ ಹೋರಾಟವನ್ನು ನಾವು ಮರೆಯಬಾರದು.
ಹೋರಾಟದಿಂದ ತಕ್ಷಣಕ್ಕೆ ಸಿಕ್ಕ ಫಲ ನಮ್ಮ ಕಣ್ಣ ಮುಂದಿದೆ. 2013ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ವಿಶೇಷ ಸ್ಥಾನಮಾನ ನೀಡಿದ ನಂತರ ಇದುವರೆಗೆ ವಿವಿಧ ಇಲಾಖೆಗಳಲ್ಲಿ 1,19,923 ಹುದ್ದೆಗಳನ್ನು ನೇರ ನೇಮಕಾತಿಗೆ ಗುರುತಿಸಿದ್ದು, 84,620 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇದೀಗ ಒಳ ಮೀಸಲಾತಿ ವಿಚಾರವನ್ನು ಬಗೆಹರಿಸಿರುವುದರಿಂದ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಉದ್ದೇಶಿಸಿದ್ದೇವೆ ಎಂದು ತಿಳಿಸಿದರು.
ಕೆಕೆಆರ್‍ಡಿಬಿಗೆ ಅಗತ್ಯ ಅನುದಾನ ಬಿಡುಗಡೆ :
ಕೆಕೆಆರ್‍ಡಿಬಿಗೆ 2013-14ನೇ ಸಾಲಿನಿಂದ 2025-26ನೇ ಸಾಲಿನವರೆಗೆ ಸರ್ಕಾರದಿಂದ 24,780 ಕೋಟಿ ರೂ.ಗಳಷ್ಟು ಅನುದಾನ ಹಂಚಿಕೆಯಾಗಿದೆ. ಇದುವರೆಗೆ 14,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನ ವೆಚ್ಚ ಮಾಡಲಾಗಿದೆ. 41,103 ಕಾಮಗಾರಿಗಳು ಕೈಗೆತ್ತಿಕೊಂಡಿದ್ದು, 32,985 ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, 8,118 ಕಾಮಗಾರಿಗಳು ವಿವಿಧ ಹಂತದ ಪ್ರಗತಿಯಲ್ಲಿವೆ. ನಮ್ಮ ಸರ್ಕಾರವು ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡುತ್ತಿದೆ. 2013-14ರಿಂದ ಬಿಡುಗಡೆಯಾದ ಅನುದಾನಗಳಲ್ಲಿ ರಸ್ತೆ ಮತ್ತು ಸಂಪರ್ಕ ವ್ಯವಸ್ಥೆಗೆ ಶೇ.50 ರಷ್ಟು, ಇನ್ನಿತರೆ ಮೂಲಸೌಕರ್ಯಗಳಿಗೆ ಶೇ.11ರಷ್ಟು ಹಾಗೂ ಶಿಕ್ಷಣ ಮತ್ತು ಆರೋಗ್ಯ ವಲಯಕ್ಕೆ ಶೇ.39ರಷ್ಟು ಹಣವನ್ನು ವಿನಿಯೋಗಿಸಲಾಗಿದೆ.
ಕೆ.ಕೆ.ಆರ್.ಡಿ.ಬಿ.ಗೆ ಪ್ರಸಕ್ತ 2025-26ನೇ ಸಾಲಿಗೆ 5,000 ಕೋಟಿ ರೂಪಾಯಿಗಳನ್ನು ಒದಗಿಸಿ, ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತುಪಡಿಸಿದೆ. ಡಾ. ಅಜಯ್ ಧರ್ಮಸಿಂಗ್ ಅವರ ಅಧ್ಯಕ್ಷತೆಯ ಮಂಡಳಿಯು ಸಿದ್ಧಪಡಿಸಿದ್ದ ಕ್ರಿಯಾಯೋಜನೆಗೆ ಅನುಮೋದನೆ ದೊರೆತಿದ್ದು, ಕಾಮಾಗಾರಿಗಳು ಆರಂಭವಾಗುತ್ತಿವೆ.
371-ಜೆ ಸ್ಥಾನಮಾನ ದೊರೆತ ನಂತರ ತಾಂತ್ರಿಕ, ವೈದ್ಯಕೀಯ ಶಿಕ್ಷಣ ಹಾಗೂ ಇನ್ನಿತರ ಪದವಿ ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಶೇ.70ರಷ್ಟು ಸ್ಥಾನಗಳನ್ನು ಮತ್ತು ರಾಜ್ಯದ ಉಳಿದ ಭಾಗಗಳಲ್ಲಿ ಶೇ.8ರಷ್ಟು ಸ್ಥಾನಗಳನ್ನು ಈ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಇದರ ಪರಿಣಾಮ 2014-15 ರಿಂದ 2024ರ ಶೈಕ್ಷಣಿಕ ಸಾಲಿನವರೆಗೆ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ, 31,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ. ಇದಲ್ಲದೆ 12,000 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ದಂತ ವೈದ್ಯಕೀಯ, ಹೋಮಿಯೋಪತಿ, ಕೃಷಿ ಸಂಬಂಧಿತ, ಬಿ-ಫಾರ್ಮಸಿ/ಡಿ-ಫಾರ್ಮಸಿ ಕೋರ್ಸುಗಳು ಮುಂತಾದವುಗಳಿಗೆ ಮೀಸಲಾತಿ ಸೌಲಭ್ಯದಿಂದ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗಿದೆ ಎಂದರು.
ಹಿಂದುಳಿದ ತಾಲ್ಲೂಕುಗಳ ಸುಧಾರಣೆ ಹಾಗೂ ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ಅಗತ್ಯ ಕ್ರಮ :
ಡಾ. ನಂಜುಂಡಪ್ಪ ಸಮಿತಿಯ ವರದಿಯ ಅನುಷ್ಠಾನದಿಂದಾಗಿ ಹಿಂದುಳಿದ ತಾಲ್ಲೂಕುಗಳಲ್ಲಿ ಆಗಿರುವ ಸುಧಾರಣೆಗಳು ಹಾಗೂ ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರ್ರೊ. ಗೋವಿಂದ ರಾವ್ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಸದರಿ ಸಮಿತಿಯು ವರದಿ ಸಲ್ಲಿಸಿದ ಕೂಡಲೆ ಸಾಧಕ ಬಾಧಕಗಳನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
ಬೆಳೆ ಪರಿಹಾರಕ್ಕೆ ಕ್ರಮ :
ಕಲ್ಯಾಣ ಕರ್ನಾಟಕ ಭಾಗದಲ್ಲಿ ಈ ವರ್ಷ ಹೆಚ್ಚಿನ ಮಳೆಯಾಗಿದ್ದರಿಂದ ಒಂದೆಡೆ ಅಣೆಕಟ್ಟುಗಳು ಭರ್ತಿಯಾದರೆ ಇನ್ನೊಂದೆಡೆ ಅತಿವೃಷ್ಟಿಯಿಂದ ಬೆಳೆಗಳಿಗೆ ಹಾನಿಯಾಗಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಸಮರ್ಪಕವಾಗಿ ಮಾಡಿ ಬೆಳೆ ಪರಿಹಾರವನ್ನು ಶೀಘ್ರವಾಗಿ ನೀಡಲು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ.
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ :
ನಮ್ಮ ಸರ್ಕಾರ ಇದುವರೆಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿದೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ವ್ಯಾಪ್ತಿಯಲ್ಲಿ ಶಕ್ತಿ ಯೋಜನೆಯಡಿ 77.6 ಕೋಟಿ ಟ್ರಿಪ್ಪುಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 2,100 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಇಷ್ಟರ ನಡುವೆಯೂ ಕಳೆದ 2 ವರ್ಷಗಳಲ್ಲಿ ಕೆ.ಕೆ.ಆರ್.ಟಿ.ಸಿ.ಗೆ ಹೊಸದಾಗಿ 937 ಹೊಸ ಬಸ್ಸುಗಳನ್ನು ಖರೀದಿಸಿ ಒದಗಿಸಿದ್ದೇವೆ. ಇದಲ್ಲದೆ 1,873 ಸಿಬ್ಬಂದಿಯನ್ನು ಸಹ ನೇಮಕ ಮಾಡಿದ್ದೇವೆ. ಗೃಹಜ್ಯೋತಿ ಯೋಜನೆಯಡಿ 21.42 ಲಕ್ಷ ಗ್ರಾಹಕರು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದು, ಇದಕ್ಕಾಗಿ 2,328 ಕೋಟಿ ರೂ ವಿನಿಯೋಗಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 24.78 ಲಕ್ಷ ಕುಟುಂಬಗಳ ಯಜಮಾನಿ ಮಹಿಳೆಯರಿಗೆ ತಲಾ 2,000 ರೂ.ಗಳಂತೆ ಒಟ್ಟು 9,650 ಕೋಟಿ ರೂ.ಗಳನ್ನು ವಿತರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಈ ಭಾಗದ ಫಲಾನುಭವಿಗಳಿಗೆ ಒಟ್ಟು 3,200 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಲಾಗಿದೆ. ಯುವನಿಧಿ ಯೋಜನೆಯಡಿ 5.75 ಲಕ್ಷ ನಿರುದ್ಯೋಗಿ ಯುವಕ-ಯುವತಿಯರಿಗೆ ಒಟ್ಟು 172 ಕೋಟಿ ರೂ.ಗಳನ್ನು ನೀಡಲಾಗಿದೆ.
ಶಿಕ್ಷಣಕ್ಕೆ ಹೆಚ್ಚು ಒತ್ತು :
ಈ ಭಾಗದ ಎಸ್.ಎಸ್.ಎ.ಲ್.ಸಿ. ಮತ್ತು ಪಿ.ಯು.ಸಿ.ಗಳಲ್ಲಿ ಉತ್ತೀರ್ಣರಾಗುವವರ ಪ್ರಮಾಣ ತೀರಾ ಕಡಿಮೆ ಇದೆ. ಶಿಕ್ಷಣದ ಗುಣಮಟ್ಟ ಕಾಪಾಡಲು, ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಹೆಚ್ಚಳ ಹಾಗೂ ವಸತಿ ನಿಲಯ ಕಟ್ಟಡ ನಿರ್ಮಾಣ ಹೀಗೆ ಅನೇಕ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕಳೆದ ಎರಡು ವರ್ಷದಿಂದ ‘ಅಕ್ಷರ ಆವಿಷ್ಕಾರ’ ಕಾರ್ಯಕ್ರಮ ರೂಪಿಸಿ ಇದೂವರೆಗೆ 6,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನಗಳನ್ನು ಖರ್ಚು ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಟ್ಟು 5,267 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಭರ್ತಿ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಈ ವರ್ಷದಿಂದ 10ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿಗಳನ್ನು ಪ್ರಾರಂಭಿಸುತ್ತಿದ್ದೇವೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಟ್ಟು 350 ಕೆ.ಪಿ.ಎಸ್. ಶಾಲೆಗಳನ್ನು ಮುಂದಿನ ಎರಡು ವರ್ಷಗಳಲ್ಲಿ ನಿರ್ಮಿಸುವ ಗುರಿ ಹೊಂದಿದ್ದೇವೆ. ಇದಲ್ಲದೆ ಉನ್ನತ ಶಿಕ್ಷಣಕ್ಕೂ ಕಳೆದ ಎರಡು ವರ್ಷಗಳಲ್ಲಿ 250 ಕೋಟಿ ರೂ.ಗಳನ್ನು ಒದಗಿಸಿದ್ದೇವೆ. ಗುಲಬರ್ಗಾ ವಿ.ವಿ. ಆವರಣದಲ್ಲಿ 1,000 ಸಾಮಥ್ರ್ಯದ ವಸತಿ ನಿಲಯ ಸಂಕೀರ್ಣವನ್ನು 78 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. 2024-25ರಿಂದ ಈವರೆಗೆ 7 ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಹೊಸ ವಸತಿ ನಿಲಯಗಳ ನಿರ್ಮಾಣಕ್ಕಾಗಿ 306 ಕೋಟಿ ರೂ., ಅಲ್ಪಸಂಖ್ಯಾತರ 41 ವಸತಿ ನಿಲಯ/ವಸತಿ ಶಾಲೆಗಳ ಕಟ್ಟಡ ನಿರ್ಮಾಣಕ್ಕಾಗಿ 204 ಕೋಟಿ ರೂ., ಸಮಾಜ ಕಲ್ಯಾಣ ಇಲಾಖೆ ವತಿಯಿಂದ 316 ಕೋಟಿ ರೂ. ವೆಚ್ಚದಲ್ಲಿ 14 ವಸತಿ ನಿಲಯ/ವಸತಿ ಶಾಲೆಗಳ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಇದಲ್ಲದೆ ಈ ಜಿಲ್ಲೆಗಳ ವಸತಿ ನಿಲಯ/ವಸತಿ ಶಾಲೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯಗಳನ್ನು ಸಹ ಒದಗಿಸಲಾಗುತ್ತಿದೆ.
ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಬ್ಯಾಂಕ್ ಖಾತೆಗಳಲ್ಲಿ ಲಭ್ಯವಿರುವ ಬಡ್ಡಿ ಮೊತ್ತದಲ್ಲಿ ಪ್ರದೇಶದ 15 ಮಹಿಳಾ ಪದವಿ ಪೂರ್ವ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಯನ್ನು 48 ಕೋಟಿ ರೂ. ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ 515 ನೂತನ ಅಂಗನವಾಡಿ ಕಟ್ಟಡಗಳನ್ನು 118 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ 50:50 ಅನುಪಾತದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಕೆ.ಕೆ.ಆರ್.ಡಿ.ಬಿ. ಅನುದಾನದಡಿ ನಿರ್ಮಿಸಲಾಗುತ್ತಿದೆ ಎಂದರು.
ಈ ಭಾಗದ ಮಕ್ಕಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಕಲಬುರಗಿಯಲ್ಲಿ ನೈಸ್ ಅಕಾಡೆಮಿ ನಾಗಾವಿ ಇನ್ ಸಿಸ್ಟ್ ಟಟ್ ಆಫ್ ಕಾಂಪಿಟೇಟಿವ್ ಎಕ್ಸಾಮ್ಸ್ ಸಂಸ್ಥೆ ಸ್ಥಾಪಿಸಿದ್ದೇವೆ. ಪ್ರತಿ ವರ್ಷ ಸುಮಾರು 2,000 ಅಭ್ಯರ್ಥಿಗಳಿಗೆ ಐ.ಎ.ಎಸ್, ಕೆ.ಎ.ಎಸ್, ಬ್ಯಾಂಕಿಂಗ್ ಹಾಗೂ ರಾಜ್ಯ ಸರ್ಕಾರದ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇಲ್ಲಿ ತರಬೇತಿ ನೀಡಲಾಗುತ್ತದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಜನರ ಆರೋಗ್ಯ ವ್ಯವಸ್ಥೆಯನ್ನು ಸಮಗ್ರವಾಗಿ ಸುಧಾರಿಸುವ ಉದ್ದೇಶದಿಂದ 1,797 ಕೋಟಿ ರೂ. ಅನುದಾನ ಒದಗಿಸುವ ಮೂಲಕ ‘ಆರೋಗ್ಯ ಆವಿಷ್ಕಾರ’ ಎಂಬ ವಿಶೇಷ ಕಾರ್ಯಕ್ರಮವನ್ನು ರೂಪಿಸಿದ್ದೇವೆ. ಕಲಬುರಗಿಯಲ್ಲಿ 163 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆμÁಲಿಟಿ ಆಸ್ಪತ್ರೆಯನ್ನು ಪ್ರಾರಂಭಿಸಲಾಗಿದೆ. 28 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯಸೌಧದ ಕಟ್ಟಡ, ಜಿಮ್ಸ್ ಆಸ್ಪತ್ರೆಯ ಆವರಣದಲ್ಲಿ 90 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, 72 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ಮುಂತಾದ ನಿರ್ಮಾಣ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ.
ನಿಮ್ಹಾನ್ಸ್ ಮಾದರಿಯ ಆಸ್ಪತ್ರೆ ಸ್ಥಾಪನೆಗೆ ಕ್ರಮ:
ಕಲಬುರಗಿಯಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಯನ್ನು ಸ್ಥಾಪಿಸಲು 100 ಕೋಟಿ, ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆಗೆ 221 ಕೋಟಿ ರೂ. ಒದಗಿಸಲಾಗಿದೆ. ಪ್ರಾದೇಶಿಕ ಎಂಡೋಕ್ರೈನಾಲಜಿ ಕೇಂದ್ರಗಳನ್ನು ಆರಂಭಿಸುವುದಕ್ಕಾಗಿ 50 ಕೋಟಿ ರೂ. ನೀಡಲಾಗಿದೆ. ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ವಿಭಾಗವನ್ನು ಆರಂಭಿಸುವುದಕ್ಕಾಗಿ 18 ಕೋಟಿ, ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವುದಕ್ಕಾಗಿ 100 ಕೋಟಿ, ರಾಯಚೂರಿನ ರಾಜೀವ್‍ಗಾಂಧಿ ಸೂಪರ್ ಸ್ಪೆμÁಲಿಟಿ ಆಸ್ಪತ್ರೆಯ ಆವರಣದಲ್ಲಿ ಪೆರಿಫರೆಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪಿಸಲು 50 ಕೋಟಿ, ಯಲಬುರ್ಗಾ, ಜೇವರ್ಗಿ ಮತ್ತು ಯಾದಗಿರಿಯಲ್ಲಿ ಹೊಸದಾಗಿ ನರ್ಸಿಂಗ್ ಕಾಲೇಜುಗಳನ್ನು ಆರಂಭಿಸಲು ಒಟ್ಟು 18 ಕೋಟಿ ರೂ. ಅನುದಾನ ಒದಗಿಸಲಾಗಿದೆ.
ಕಲಬುರಗಿಯ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಸ್ಪತ್ರೆ ಕಟ್ಟಡ ಮತ್ತು ಉಪಕರಣಗಳಿಗಾಗಿ 287 ಕೋಟಿ ರೂ.ಗಳನ್ನು ಒದಗಿಸಿದ್ದೇವೆ. ಆಸ್ಪತ್ರೆಯು ಈಗಾಗಲೇ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಹೃದ್ರೋಗಿಗಳಿಗೆ ಅತ್ಯುತ್ತಮ ಸೇವೆ ಸಿಗುವಂತಾಗಿದೆ. 9.60 ಕೋಟಿ ರೂ.ಗಳ ಮೊತ್ತದಲ್ಲಿ ಕೆ.ಕೆ.ಆರ್.ಡಿ.ಬಿ. ಹಾರ್ಟ್ ಲೈನ್ ಯೋಜನೆಗೆ ಇಂದಿಲ್ಲಿ ಚಾಲನೆ ನೀಡಲಾಗುತ್ತಿದ್ದು, 32 ಅಂಬ್ಯುಲೆನ್ಸ್ ಗಳನ್ನು ಹೃದಯಾಘಾತದ ತುರ್ತು ಸಂದರ್ಭದಲ್ಲಿ ಅವಶ್ಯಕವಾಗಿರುವ ಉಪಕರಣಗಳೊಂದಿಗೆ ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಗುತ್ತಿದೆ ಎಂದು ಹೇಳಿದರು.
ಏಮ್ಸ್ ಸಂಸ್ಥೆಯನ್ನು ಸ್ಥಾಪಿಸಲು ಅಗತ್ಯ ನೆರವು :
ರಾಯಚೂರಿನಲ್ಲಿ ಏಮ್ಸ್ ಸಂಸ್ಥೆಯನ್ನು ಸ್ಥಾಪಿಸಲು ನಮ್ಮ ಸರ್ಕಾರವು ಅಗತ್ಯವಿರುವ ಎಲ್ಲ ನೆರವನ್ನು ಒದಗಿಸಲು ಸಿದ್ಧವಿದೆ. ಕೇಂದ್ರಕ್ಕೆ ಹಲವಾರು ಪತ್ರಗಳನ್ನು ಬರೆದಿದ್ದೇವೆ. ಸ್ವತಃ ಕೇಂದ್ರದ ಸಚಿವರುಗಳನ್ನು ಭೇಟಿ ಮಾಡಿ ಒತ್ತಾಯಿಸಿದ್ದೇವೆ. ಆದರೂ ಸಹ ಕೇಂದ್ರ ಸರ್ಕಾರ ಕಿಂಚಿತ್ತು ಸಹಕಾರವನ್ನು ತೋರಿಸುತ್ತಿಲ್ಲ. ಹಾಗಾಗಿ ಕೇಂದ್ರ ಸರ್ಕಾರವು ಕೂಡಲೆ ಏಮ್ಸ್ ಸಂಸ್ಥೆ ಪ್ರಾರಂಭಿಸಲು ಕ್ರಮವಹಿಸಬೇಕೆಂದು ಒತ್ತಾಯಿಸುತ್ತೇನೆ.
ಹೆಲ್ತ್ ಹಬ್ ಸ್ಥಾಪನೆಗೆ ಕ್ರಮ :
ಮಾನ್ಯ ಮಲ್ಲಿಕಾರ್ಜುನ್ ಖರ್ಗೆಯವರ ಕನಸಿನಂತೆ ಕಲಬುರಗಿಯನ್ನು ರೀಜನಲ್ ಹೆಲ್ತ್ ಹಬ್ ಮಾಡುವತ್ತ ಹೆಜ್ಜೆ ಇಟ್ಟಿದ್ದೇವೆ. ಈ ಭಾಗದ ಜನರು ಚಿಕಿತ್ಸೆಗಾಗಿ ದೂರದ ಬೆಂಗಳೂರು, ಮುಂಬೈ, ಹೈದರಾಬಾದಿಗೆ ಹೋಗುವುದನ್ನು ತಪ್ಪಿಸಿ, ಇಲ್ಲಿಯೇ ಗುಣಮಟ್ಟದ ಚಿಕಿತ್ಸೆ ನೀಡುವುದು ನಮ್ಮ ಉದ್ದೇಶಿಸಲಾಗಿದೆ. ಈ ಭಾಗದಲ್ಲಿ ಬೆಳೆಯುವ ರುಚಿಕರವಾದ ಮಾಲ್ದಂಡಿ ಜೋಳದಿಂದ ಮಾಡಿದ ರೊಟ್ಟಿಯನ್ನು “ಕಲಬುರಗಿ ರೊಟ್ಟಿ” ಎನ್ನುವ ಬ್ರ್ಯಾಂಡ್ ಹೆಸರಿನೊಂದಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ 100ಕ್ಕೂ ಅಧಿಕ ರೊಟ್ಟಿ ಮಾಡುವ ಯಂತ್ರಗಳನ್ನು ಮಹಿಳೆಯರಿಗೆ ಮತ್ತು ಮಹಿಳಾ ಸ್ವಸಹಾಯ ಸಂಘದವರಿಗೆ ಸಬ್ಸಿಡಿ ರೂಪದಲ್ಲಿ ನೀಡಲಾಗಿದೆ. ಹೊರ ರಾಜ್ಯ ಸೇರಿದಂತೆ ವಿದೇಶಗಳಿಗೆ ಸಹ ಮಾರುಕಟ್ಟೆಯನ್ನು ವಿಸ್ತರಿಸಲು ಆನ್‍ಲೈನ್ ಮುಖಾಂತರ ವೇದಿಕೆ ಸೃಜಿಸಲಾಗಿದೆ.
ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಏಕೀಕರಣ ಅಗತ್ಯವಿರುವುದರಿಂದ ಕಲಬುರಗಿಯಲ್ಲಿ ಅಗ್ರಿ-ಟೆಕ್ ವೇಗವರ್ಧಕ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತೋಟಗಾರಿಕಾ ಟೆಕ್ ಪಾರ್ಕಿನ ಅಭಿವೃದ್ಧಿಗಾಗಿ 8.05 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸಲು ನಮ್ಮ ಸರ್ಕಾರವು 10 ಕೋಟಿ ರೂ. ಅನುದಾನವನ್ನು ಪ್ರಥಮ ಹಂತದಲ್ಲಿ ನೀಡಲು ತೀರ್ಮಾನಿಸಿದೆ. ಕಲಬುರಗಿ-ಬೀದರ್ ಮತ್ತು ಯಾದಗಿರಿ ಜಿಲ್ಲೆಗಳ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮದಿಂದ ಆಧುನೀಕೃತ ಡೈರಿ ಯೋಜನೆಯಡಿ ಕಲಬುರಗಿಯಲ್ಲಿ 50 ಕೋಟಿ ರೂ ವೆಚ್ಚದಲ್ಲಿ ಮೆಗಾ ಡೈರಿ ಸ್ಥಾಪಿಸಲಾಗುತ್ತಿದೆ. ಇದರಿಂದ ಈ ಪ್ರದೇಶದÀ 3 ಜಿಲ್ಲೆಗಳ 25 ಸಾವಿರ ಕೃಷಿ ಕುಟುಂಬಗಳ 1.50 ಲಕ್ಷ ಜನರಿಗೆ ಅನುಕೂಲವಾಗುವ ನಿರೀಕ್ಷೆಯಿದೆ ಎಂದರು
ವಿವಿಧ ಕಾಮಗಾರಿಗಳಿಗೆ ಅಗತ್ಯ ನೆರವು :
ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಕೆರೆ ತುಂಬಿಸುವ ಕಾಮಗಾರಿ, ಜೇವರ್ಗಿ ತಾಲೂಕಿನ ಬಾಂದಾರ ನಿರ್ಮಾಣ ಕಾಮಗಾರಿ, ಸೇಡಂ ತಾಲೂಕಿನ ಕಾಚೂರು ಗ್ರಾಮದ ಹತ್ತಿರ ಏತ ನೀರಾವರಿ ಯೋಜನೆ, ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕುರ್ಡಿಕೆರೆ ತುಂಬಿಸುವ ಕಾಮಗಾರಿಗಳಿಗೆ ಒಟ್ಟು 480 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಂಡಾಳ, ಮಟಕಿ, ನಿರಗುಡಿ, ಪಡಸಾವಳಿ, ಬಸಂತವಾಡಿ, ನಿಂಬರ್ಗಾ ಮುಂತಾದ ಕಡೆ ನಾಲೆ, ಕಿರುಸೇತುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ.ಗಳ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ 3,687 ಎಕರೆ ಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಕಾಮಗಾರಿಗಳನ್ನು ಶೀಘ್ರವಾಗಿ ಅನುμÁ್ಠನ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ತೆಲಂಗಾಣ ಗಡಿ ಪುಟಪಾಕ್- ಭೋಸ್ಲಾ ರಾಜ್ಯ ಹೆದ್ದಾರಿ ಕಾಗಿಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು 53 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆಗೂ ಮತ್ತು ಅಭಿವೃದ್ಧಿಗೂ ನೇರಾ ನೇರ ಸಂಬಂಧವಿರುವÀಂತೆ, ಹಸಿರಿಗೂ ಅಭಿವೃದ್ಧಿಗೂ ಸಂಬಂಧವಿದೆ. ಆದ್ದರಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಅರಣ್ಯ ಪ್ರದೇಶ ಅಭಿವೃದ್ಧಿಗಾಗಿ ಹಸಿರು ಪಥ ಯೋಜನೆ ಮೂಲಕ ನೆಡುತೋಪುಗಳು, ಟ್ರೀ-ಪಾರ್ಕುಗಳ ನಿರ್ಮಾಣ ಮತ್ತು ರಸ್ತೆಯ ಇಬ್ಬದಿಗಳಲ್ಲಿ ಸಸಿ ನೆಡುವ ಯೋಜನೆಗಳಿಗಾಗಿ 2025-26ನೇ ಸಾಲಿನಲ್ಲಿ 100 ಕೋಟಿ ರೂ. ಒದಗಿಸಿದ್ದೇವೆ.
ಕೈಗಾರಿಕಾ ನೀತಿ 2025-30 ರಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ವಿಶೇಷ ಸವಲತ್ತುಗಳು :
ರಾಜ್ಯ ಸರ್ಕಾರ ಜಾರಿಗೆ ತಂದಿರುವ ನೂತನ ಕೈಗಾರಿಕಾ ನೀತಿ 2025-30 ರಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ವಿಶೇಷ ಸವಲತ್ತುಗಳನ್ನು ಕಲ್ಪಿಸಲಾಗಿದೆ. ಈ ಭಾಗದ ಸೂಕ್ಷ್ಮ ಕೈಗಾರಿಕೆಗಳಿಗೆ ಶೇ.40, ಸಣ್ಣ ಕೈಗಾರಿಕೆಗಳಿಗೆ ಶೇ.35 ಹಾಗೂ ಮಧ್ಯಮ, ಬೃಹತ್ ಕೈಗಾರಿಕೆಗಳಿಗೆ ಶೇ.30 ರಷ್ಟು ಬಂಡವಾಳ ಸಹಾಯ ಧನ ನೀಡುವುದರ ಜೊತೆಗೆ ಮುದ್ರಾಂಕ ಶುಲ್ಕ, ವಿದ್ಯುತ್ ತೆರಿಗೆ ವಿನಾಯಿತಿ ಮತ್ತು ಇನ್ನಿತರೆ ಪ್ರೋತ್ಸಾಹಗಳನ್ನು ನೀಡುವ ಮೂಲಕ ಈ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ.
ಕಲಬುರಗಿಯ ನಂದೂರ-ಕೆಸರಟಗಿ ಕೈಗಾರಿಕಾ ಪ್ರದೇಶ 2 ನೇ ಹಂತದಲ್ಲಿ Trade Infrastructure for export scheme (TIES) ರಡಿ 17 ಕೋಟಿ ರೂ. ವೆಚ್ಚದಲ್ಲಿ 6.5 ಎಕರೆಗಳಲ್ಲಿ ಪ್ಲಗ್ ಅಂಡ್ ಪ್ಲೇ ಕಟ್ಟಡ ನಿರ್ಮಾಣ, 37 ಎಕರೆಗಳಲ್ಲಿ ವಿದ್ಯುನ್ಮಾನ ಉತ್ಪನ್ನಗಳ ತಯಾರಿಕಾ ಕೈಗಾರಿಕೆ, 49 ಎಕರೆಗಳಲ್ಲಿ ರಾಸಾಯನಿಕ ಮತ್ತು ಅನಿಲ ಕೈಗಾರಿಕೆಗಳು, 5.5 ಎಕರೆಗಳಲ್ಲಿ ಫುಡ್ ಪಾರ್ಕ್, 5 ಎಕರೆಗಳಲ್ಲಿ ಸುಸ್ಥಿರ ಪಾರ್ಕ್ ಗಳನ್ನು ಸ್ಥಾಪಿಸಲಾಗುತ್ತಿದೆ. ಕಲಬುರಗಿಯ ಕಪನೂರ ಕೈಗಾರಿಕಾ ಪ್ರದೇಶದ 3ನೇ ಹಂತದಲ್ಲಿನ 20ಎಕರೆ ಜಾಗದಲ್ಲಿ ಆಟೋಮೊಬೈಲ್ ವಾಹನಗಳ ದುರಸ್ತಿ ಮತ್ತು ಸಂಬಂಧಪಟ್ಟ ಎಲ್ಲಾ ವೃತ್ತಿಗಳ ಸುಮಾರು 400 ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳಿಗೆ ಒಂದೇ ಸೂರಿನಡಿ ಸ್ಥಳಾವಕಾಶ ಕಲ್ಪಿಸುವ ಉದ್ದೇಶದಿಂದ “AUTO AND GENERAL ENGINEERING CLUSTER” ಸ್ಥಾಪಿಸಲಾಗುತ್ತಿದೆ ಎಂದರು.
ಬೆಂಗಳೂರು ಹೊರತುಪಡಿಸಿ ಇತರೆ ನಗರಗಳಲ್ಲಿಯೂ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು, 1,000 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ [ಲೀಪ್] ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಇದಕ್ಕೆ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಈ ಕಾರ್ಯಕ್ರಮಗಳಿಂದ ರಾಜ್ಯಾದ್ಯಂತ ಐದು ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿಯಿದೆ. ಇತ್ತೀಚಿನ ವರ್ಷಗಳಲ್ಲಿ, ಕಲ್ಯಾಣ ಕರ್ನಾಟಕ ಪ್ರದೇಶವು ತನ್ನ ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಯಲ್ಲಿ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಈಗ 120 ಕ್ಕೂ ಹೆಚ್ಚು ಸಕ್ರಿಯ ಸ್ಟಾರ್ಟ್ ಅಪ್ ಗಳಿಗೆ ಕಲಬುರಗಿ ನೆಲೆಯಾಗಿದೆ. ಇದರಿಂದಾಗಿ ಈ ಭಾಗದ ಪ್ರತಿಭಾವಂತರ ವಲಸೆಯನ್ನು ತಡೆಯಲು ತಕ್ಕಮಟ್ಟಿಗೆ ಸಾಧ್ಯವಾಗಿದೆ. 2030ರ ವೇಳೆಗೆ 500ಕ್ಕೂ ಹೆಚ್ಚು ಸ್ಟಾರ್ಟ್‍ಅಪ್ ಗಳನ್ನು ಸ್ಥಾಪಿಸಲು ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ.
ಬಹು-ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಕ್ರಮ:
ಇಲ್ಲಿನ ವಿದ್ಯಾರ್ಥಿಗಳಿಗೆ ಉದ್ಯೋಗದ ಸಮಸ್ಯೆ ಇರಬಾರದು ಎಂಬ ಉದ್ದೇಶದಿಂದ ನಮ್ಮ ಸರ್ಕಾರವು ಉದ್ಯೋಗಾಧಾರಿತ ಶಿಕ್ಷಣಕ್ಕೆ ಅತಿ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಜಿಟಿಟಿಸಿ ಬಹು-ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ವಿ.ಟಿ.ಯು.ಸಹಯೋಗದೊಂದಿಗೆ ಕೊಪ್ಪಳ ಜಿಲ್ಲೆಯ ತಳಕಲ್ಲ ಮತ್ತು ಕಲಬುರಗಿಯಲ್ಲಿ ತಲಾ 120 ಕೋಟಿ ರೂ.ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. 60 ಕೋಟಿ. ರೂ ವೆಚ್ಚದಲ್ಲಿ ಕಂಪ್ಲಿ, ರಾಯಚೂರು, ಸಿಂಧನೂರ ಮತ್ತು ಜೇವರ್ಗಿ ತಾಲೂಕುಗಳಲ್ಲಿ ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುತ್ತಿದ್ದೇವೆ. ಕಲಬುರಗಿ ಜಿಲ್ಲೆಯ ಸೇಡಂನಲ್ಲಿರುವ ಸರ್ಕಾರಿ ಐ.ಟಿ.ಐ.ಯನ್ನು 25 ಕೋಟಿ ರೂ. ಅನುದಾದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಉನ್ನತೀಕರಿಸುತ್ತಿದ್ದೇವೆ ಎಂದು ಹೇಳಿದರು.
ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಅಗತ್ಯ ನೆರವು :
ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗಾಗಿ ಕೆಕೆಆರ್‍ಡಿಬಿ ವತಿಯಿಂದ ಒಟ್ಟು 200 ಕೋಟಿ ರೂ.ಗಳ ಅನುದಾನವನ್ನು ಒದಗಿಸಿದ್ದೇವೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಬೆಳವಣಿಗೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ/ ತಾರಾಲಯಗಳನ್ನು ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ. ಕಲಬುರಗಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಲಾಗುತ್ತಿದ್ದು, ಒಟ್ಟಾರೆ 390 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿ ಜವಳಿ ಪಾರ್ಕಿಗೆ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ. ಇದರಿಂದ 1 ಲಕ್ಷ ಜನರಿಗೆ ನೇರ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗುವ ನಿರೀಕ್ಷೆಯಿದೆ ಎಂದರು.
ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಎಂಎಸ್‍ಡಿಸಿ ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುತ್ತಿದೆ. ಪ್ರತಿ ವರ್ಷ 2,500 ಅಭ್ಯರ್ಥಿಗಳಿಗೆ ಉದ್ಯೋಗಾಧಾರಿತ ವಸತಿ ಸಹಿತ ಕೌಶಲ್ಯ ತರಬೇತಿ ನೀಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ 38 ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲು “ಕಲ್ಯಾಣ ಪಥ” ಯೋಜನೆಯನ್ನು ರೂಪಿಸಿದ್ದೇವೆ. ಈ ಯೋಜನೆಯ ಮೂಲಕ 1150 ಕಿ.ಮೀ. ಗ್ರಾಮೀಣ ರಸ್ತೆಗಳನ್ನು 1000 ಕೋಟಿ ರೂ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸುತ್ತಿದ್ದೇವೆ. “ಪ್ರಗತಿ ಪಥ” ಯೋಜನೆಯಡಿ ರಾಜ್ಯಾದ್ಯಂತ 5200 ಕೋಟಿ ರೂ.ವೆಚ್ಚದಲ್ಲಿ 7,110 ಕಿಮೀ ರಸ್ತೆಗಳ ಸುಧಾರಣೆಗೆ ಕ್ರಮವಹಿಸುತ್ತಿದ್ದೇವೆ. ಇದರಲ್ಲಿ ಕಲಬುರಗಿ ಜಿಲ್ಲೆಯೊಂದರಲ್ಲೇ 220ಕಿ.ಮೀ ರಸ್ತೆ ಸುಧಾರಣೆಯಾಗಲಿದೆ. ಈ ಪ್ರದೇಶದ ಜಿಲ್ಲೆಗಳಲ್ಲಿ 400 ಮಹಿಳಾ ನೈರ್ಮಲ್ಯ ಮತ್ತು ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಪ್ರತಿ ಘಟಕಕ್ಕೆ 25 ಲಕ್ಷದಂತೆ ಒಟ್ಟು 100 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದರು.
ಕುಡಿಯುವ ನೀರು ಯೋಜನೆಗೆ ಅಗತ್ಯ ಕ್ರಮ :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಎಲ್ಲಾ ಗ್ರಾಮೀಣ ಜನವಸತಿಗಳಿಗೆ ಆಃಔಖಿ ಆಧಾರದ ಮೇಲೆ ಸಮಗ್ರ ಬಹುಗ್ರಾಮ ಕುಡಿಯುವ ನೀರು ಯೋಜನೆಯನ್ನು 7,200 ಕೋಟಿ ರೂ.ಗಳ ಮೊತ್ತದಲ್ಲಿ ಅನುμÁ್ಠನಗೊಳಿಸುವ ಬಗ್ಗೆ ಕೇಂದ್ರ ಸರ್ಕಾರದ ಪಾಲಿನ ಅನುದಾನದ ನಿರೀಕ್ಷೆಯಲ್ಲಿದ್ದೇವೆ. ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ 16 ಹೊಸ ತಾಲೂಕುಗಳಲ್ಲಿ ಆಡಳಿತಾತ್ಮಕವಾಗಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು 138 ಕೋಟಿರೂ. ಅನುದಾನದಲ್ಲಿ “ಪ್ರಜಾ ಸೌಧ” ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಮಹಾತ್ಮಾ ಗಾಂಧಿನಗರ ವಿಕಾಸ ಯೋಜನೆ 2.0 ಅಡಿ ಕಲಬುರಗಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ತಲಾ 200 ಕೋಟಿ ರೂ ಒದಗಿಸಲಾಗಿದೆ ಎಂದರು.
ಯಾದಗಿರಿ ಜಿಲ್ಲೆಯ ಶಹಾಪೂರದಲ್ಲಿ 292 ಕೋಟಿ ರೂ.ಗಳ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ನಿರ್ಮಿಸುತ್ತಿದ್ದೇವೆ. ಇದರ ಜೊತೆಗೆ 23 ಕೋಟಿ ರೂ ಮೊತ್ತದಲ್ಲಿ ಸಿಂಧನೂರಿನಲ್ಲಿ ಕುಡಿಯುವ ನೀರಿನ ಯೋಜನೆಯ ಅನುμÁ್ಠನ ಕೈಗೊಳ್ಳಲಾಗುವುದು.
51. ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗಳಿಗೆ ಹಾಗೂ ಹೈಮಾಸ್ಟ್ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವುದಕ್ಕಾಗಿ 2023-24ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಟ್ಟು 3,411 ಕೋಟಿ ರೂ. ಒದಗಿಸಲಾಗಿದೆ. ಕೆ.ಕೆ.ಆರ್.ಡಿ.ಬಿ. ಮತ್ತು ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರಗಳ ಜಂಟಿ ಅನುದಾನದಲ್ಲಿ ಕಲಬುರಗಿ ನಗರದಲ್ಲಿ ತರಕಾರಿ ಮಾರುಕಟ್ಟೆಯನ್ನು 27 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಶೀಘ್ರವೇ ಇದನ್ನು ಉದ್ಘಾಟಿಸಿ ಲೋಕಾರ್ಪಣೆ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕ್ರೀಡೆಗೆ ಉತ್ತೇಜನ ನೀಡಲು ಕಲಬುರಗಿಯನ್ನು ಕ್ರೀಡಾ ನಗರಿಯನ್ನಾಗಿ ಮಾಡಲಾಗುತ್ತಿದೆ. ಕಲಬುರಗಿ ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶೇಷವಾಗಿ ಬಾಲಕಿಯರಿಗೆ ಪ್ರತ್ಯೇಕ ಒಳಾಂಗಣ ಕ್ರೀಡಾ ಸಂಕೀರ್ಣ ಸೇರಿದಂತೆ ಒಟ್ಟಾರೆ 18 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ.
ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅಗತ್ಯ ಕ್ರಮ :
ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲು ಬದ್ಧವಾಗಿದ್ದೇವೆ. ಈಗಾಗಲೇ 10 ಕೋಟಿ ರೂ ನೀಡಿದ್ದೇವೆ. ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ 2025-26ನೇ ಸಾಲಿನಲ್ಲಿ ಒಟ್ಟು 25 ಕೋಟಿ ರೂ.ಗಳ ಅನುದಾನ ನೀಡಲಾಗಿದೆ. ಕಲಬುರಗಿಯಲ್ಲಿ ಬಸವಣ್ಣ ಹಾಗೂ ಇತರ ಶರಣರ ವಚನಗಳನ್ನು ವಿಶ್ವಕ್ಕೆ ಪರಿಚಯಿಸುವ ಉದ್ದೇಶದಿಂದ ‘ವಚನ ಮಂಟಪ’ವನ್ನು ಸ್ಥಾಪಿಸಲಾಗುತ್ತಿದೆ. ಈಗಾಗಲೇ ಜಮೀನು ಗುರುತಿಸಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಿಸಲಾಗುವುದು. ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಬಸವಕಲ್ಯಾಣದಲ್ಲಿ ‘ಅನುಭವ ಮಂಟಪ’ವನ್ನು ವಿನ್ಯಾಸಗೊಳಿಸಿ ಶಂಕುಸ್ಥಾಪನೆ ಮಾಡಿದ್ದೆವು. ಈಗ ಅದಕ್ಕೆ ಅಗತ್ಯವಿರುವ ಅನುದಾನ ಒದಗಿಸುತ್ತಿದ್ದೇವೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿನ 8 ಐತಿಹಾಸಿಕ ಮತ್ತು ಪ್ರಾಚೀನ ಸ್ಮಾರಕಗಳನ್ನು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಸಂರಕ್ಷಣೆಗೆ ಕಳೆದ ಕಲಬುರಗಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು, ಇದಕ್ಕಾಗಿ ಸುಮಾರು 313 ಕೋಟಿ ರೂ. ವೆಚ್ಚ ಮಾಡಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಐತಿಹಾಸಿಕ ಸನ್ನತಿ ಅಭಿವೃದ್ಧಿಗಾಗಿ ಪ್ರತ್ಯೇಕವಾಗಿ ಪ್ರಾಧಿಕಾರವನ್ನು ರಚಿಸಲಾಗುತ್ತಿದೆ. ಕಳೆದ ವರ್ಷ ಕಲ್ಬುರ್ಗಿಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ 11,770 ಕೋಟಿ ರೂ. ಗಳಷ್ಟು ಬೃಹತ್ ಮೊತ್ತದ ಯೋಜನೆಗಳು ಹಾಗೂ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ತೀರ್ಮಾನ ಮಾಡಲಾಗಿತ್ತು. ಅದರಂತೆ ಅದರಲ್ಲಿ ಬಹುತೇಕ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ದಿನಾಂಕ 16-9-2025 ರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕವೂ ಸೇರಿದಂತೆ ಉತ್ತರ ಕರ್ನಾಟಕದ ಜನರ ಬದುಕನ್ನು ಸುಧಾರಿಸಿ ಹೊಸ ದಿಕ್ಕಿನತ್ತ ಮುನ್ನಡೆಯುವ ಎರಡು ಮಹತ್ವದ ತೀರ್ಮಾನಗಳನ್ನು ನಮ್ಮ ಸರ್ಕಾರವು ತೆಗೆದುಕೊಂಡಿದೆ. ಕೃμÁ್ಣ ಮೇಲ್ದಂಡೆ ಯೋಜನೆಯ 3ನೇ ಹಂತದ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಭೂಮಿಯನ್ನು ರೈತರಿಂದ ಒಪ್ಪಿಗೆ ಆಧಾರದಲ್ಲಿ ಪಡೆದುಕೊಂಡು ಆಲಮಟ್ಟಿ ಅಣೆಕಟ್ಟೆಯನ್ನು ಎತ್ತರಿಸುವ ಮೂಲಕ 15 ಲಕ್ಷ ಎಕರೆಗೂ ಹೆಚ್ಚಿನ ಭೂ-ಪ್ರದೇಶಕ್ಕೆ ನೀರಾವರಿ ಸೌಲಭ್ಯ ನೀಡಲು ನೀರ್ಮಾನಿಸಿದ್ದೇವೆ. ಈ ಯೋಜನೆಯಿಂದ ರಾಯಚೂರು, ಯಾದಗಿರಿ, ಕಲ್ಬುರ್ಗಿ, ಕೊಪ್ಪಳ ಜಿಲ್ಲೆಗಳ ಬಹುಪಾಲು ಒಣಭೂಮಿಗಳಿಗೆ ನೀರಾವರಿ ಸೌಲಭ್ಯ ದೊರಕುತ್ತದೆ. ಇದಕ್ಕಾಗಿ ಮುಂದಿನ 3 ವರ್ಷಗಳಲ್ಲಿ ನಮ್ಮ ಸರ್ಕಾರವು 70000 ಕೋಟಿ ರೂಗಳಿಗೂ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಲು ತೀರ್ಮಾನಿಸಿದೆ ಎಂದು ತಿಳಿಸಿದರು
ಕಲ್ಬುರ್ಗಿಯಲ್ಲಿ ಕಲ್ಯಾಣ ಕರ್ನಾಟಕ ಸಚಿವಾಲಯವನ್ನು ಸ್ಥಾಪಿಸಲು ಕ್ರಮ :
ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ದೊರೆತರೂ ಇದುವರೆಗೆ ಇಲ್ಲಿ ಸಚಿವಾಲಯ ಸ್ಥಾಪನೆಯಾಗಿರಲಿಲ್ಲ. ಇದನ್ನು ಮನಗಂಡ ನಮ್ಮ ಸರ್ಕಾರವು ಕಲ್ಬುರ್ಗಿಯಲ್ಲಿ ಕಲ್ಯಾಣ ಕರ್ನಾಟಕ ಸಚಿವಾಲಯವನ್ನು ಸ್ಥಾಪಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಮುಂದಿನ ವಾರದೊಳಗೆ ಹುದ್ದೆಗಳ ಸಮೇತ ಅಧಿಸೂಚನೆ ಹೊರಡಿಸುತ್ತೇವೆಂದು ತಿಳಿಸಲು ಹರ್ಷಿಸುತ್ತೇನೆ.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ಮತ್ತೊಮ್ಮೆ ತಮ್ಮೆಲ್ಲರಿಗೂ ಶುಭ ಕೋರುತ್ತಾ, ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಾಗದ ಹೊರತು ಸಂಪೂರ್ಣ ರಾಜ್ಯದ ಅಭಿವೃದ್ಧಿ ಅಸಾಧ್ಯ. ಇಲ್ಲಿನ ಜನರ ತಲಾದಾಯವನ್ನು ಹೆಚ್ಚಿಸುವುದರ ಜೊತೆಗೆ ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲಸೌಕರ್ಯ ಸುಧಾರಣೆ ಸೇರಿದಂತೆ ಸವಾರ್ಂಗೀಣ ಅಭಿವೃದ್ಧಿ ನಮ್ಮ ಸರ್ಕಾರದ ಗುರಿಯಾಗಿದೆ. ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡಲು ಬದ್ಧರಾಗಿ ದೃಢ ಸಂಕಲ್ಪ ಮಾಡುವುದರ ಮೂಲಕ ನವ ಭಾರತ ಮತ್ತು ನವ ಕರ್ನಾಟಕ ನಿರ್ಮಿಸೋಣ ಎಂದು ಮುಖ್ಯಮಂತ್ರಿಗಳು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ್, ಕೆಕೆಆರ್‍ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮತ್ತಿತರರು ಉಪಸ್ಥಿತರಿದ್ದರು.