ಅಭಿನಯ ಸರಸ್ವತಿ ಬಿ.ಸರೋಜಾದೇವಿ ಪ್ರಶಸ್ತಿ ಸ್ಥಾಪಿಸಿ ಸರ್ಕಾರದಿಂದ ಆದೇಶ

varthajala
0

ಬೆಂಗಳೂರು, ಸೆಪ್ಟೆಂಬರ್ 17  (ಕರ್ನಾಟಕ ವಾರ್ತೆ) : ಕನ್ನಡ ಚಲನಚಿತ್ರ ನಟಿ, ಪದ್ಮಶ್ರೀ ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತೆ ದಿವಂಗತ ಬಿ.ಸರೋಜಾದೇವಿ ಅವರು ಪಂಚಭಾಷೆ ತಾರೆಯಾಗಿದ್ದು, ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ, 2025 ನೇ ಸಾಲಿನಿಂದ ಅವರ ಹೆಸರಿನಲ್ಲಿ ಅಭಿನಯ ಸರಸ್ವತಿ ಬಿ.ಸರೋಜಾದೇವಿ ಪ್ರಶಸ್ತಿ ಸ್ಥಾಪಿಸಿ ಸರ್ಕಾರವು ಆದೇಶಿಸಿದೆ.


ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿಯು 1 ಲಕ್ಷ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ಒಳಗೊಂಡಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)