ಬೆಂಗಳೂರು, ಅಕ್ಟೋಬರ್ 18, (ಕರ್ನಾಟಕ ವಾರ್ತೆ): ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವಿವಿಧ 184 ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಮಂಡಳಿಯ ವತಿಯಿಂದ ವಿವಿಧ 184 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಪರೀಕ್ಷೆ ನಡೆಸಲಾಗಿತ್ತು. ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಅಧಿಕಾರಿಗಳು – 12 ಹುದ್ದೆಗಳು, ಕ್ಷೇತ್ರ ನಿರೀಕ್ಷಕರು - 60 ಹುದ್ದೆಗಳು, ಪ್ರಥಮ ದರ್ಜೆ ಸಹಾಯಕರು - 12 ಹುದ್ದೆಗಳು, ದ್ವಿತೀಯ ದರ್ಜೆ ಸಹಾಯಕರು - 100 ಹುದ್ದೆಗಳ ಆಯ್ಕೆಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಮಂಡಳಿಯ ವೆಬ್‍ಸೈಟ್ https://karbwwb.karnataka.gov. in ಮತ್ತು ಮಂಡಳಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಜಂಟಿ ಕಾರ್ಯದರ್ಶಿಗಳು ಹಾಗೂ ನೇಮಕಾತಿ ಸಮಿತಿಯ ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.