ಬೆಂಗಳೂರು, ಅಕ್ಟೋಬರ್ 13, (ಕರ್ನಾಟಕ ವಾರ್ತೆ): ಕರ್ನಾಟಕ ಮಾಹಿತಿ ಆಯೋಗದ ವತಿಯಿಂದ ಮಾಹಿತಿ ಹಕ್ಕು ಅಧಿನಿಯಮ-2005 ಜಾರಿಗೆ ಬಂದು 2025ಕ್ಕೆ 20 ವರ್ಷಗಳು ತುಂಬಿರುವ ಪ್ರಯುಕ್ತ ಅಕ್ಟೋಬರ್ 14ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಯುವನಿಕ ಸಭಾಂಗಣದಲ್ಲಿ ಸಮಾರಂಭವನ್ನು ಆಯೋಜಿಸಲಾಗಿದೆ.
ಸಮಾರಂಭದಲ್ಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಅತಿಥಿಗಳಾಗಿ ಭಾಗವಹಿಸಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಶಾಸಕರಾದ ಎನ್.ಎ. ಹ್ಯಾರಿಸ್ ಪಾಲ್ಗೊಳ್ಳಲಿದ್ದು, ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.