ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಅವಧಿ ಡಿಸೆಂಬರ್ 31 ರವರೆಗೆ ವಿಸ್ತರಣೆ

varthajala
0

 ಬೆಂಗಳೂರು ಅಕ್ಟೋಬರ್ 24  (ಕರ್ನಾಟಕ ವಾರ್ತೆ): ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಅವಧಿಯನ್ನು ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರ್ಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.


ಸಮೀಕ್ಷೆಯನ್ನು 15 ಜಿಲ್ಲೆಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಗುತ್ತಿದೆ. ಸಮುದಾಯ ಆಧಾರಿತ ಸಂಸ್ಥೆಗಳೊಂದಿಗೆ ಅಕ್ಟೋಬರ್ 15 ರಂದು ನಡೆದ ಸಭೆಯಲ್ಲಿ ವಿವಿಧ ಕಾರಣಗಳಿಂದ ಸಮೀಕ್ಷೆಯ ಅವಧಿಯನ್ನು ಹೆಚ್ಚಿಸಲು ಅವರು ಕೋರಿದ್ದು, ಅದರಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಅನುಮೋದಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)