50 ದಿನಗಳ ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ತರಬೇತಿ

varthajala
0

 ಬೆಂಗಳೂರು ಅಕ್ಟೋಬರ್ 24  (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ವು ಅಕ್ಟೋಬರ್ 29 ರಂದು  ಬೆಳಿಗ್ಗೆ 11:30 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ 50 ದಿನಗಳ ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ತರಬೇತಿ ಶಿಬಿರದ ಉದ್ಘಾಟನೆಯನ್ನು ನಿವೃತ್ತ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕ ಶಂಕರ್ ಬಿದರಿ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಮೈಸೂರು ನಗರ ಉಪ ಆಯುಕ್ತರಾದ ಆರ್.ಎನ್. ಬಿಂದುಮಣಿ ಮುಖ್ಯ ಭಾಷಣ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಸಚಿವ ಪ್ರೊ. ಎಸ್.ಕೆ ನವೀನ್ ಕುಮಾರ್ ಉಪಸ್ಥಿತರಿರುವರು.

ಈಗಲೂ ತರಬೇತಿಗೆ ಪ್ರವೇಶಾತಿ ಪಡೆಯಲು ಅವಕಾಶವಿದೆ. ಹೆಚ್ಚಿನ ವಿವರಗಳಿಗೆ 0821-2515944 / 9964760090 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯ ನಾರಾಯಣಗೌಡ ತಿಳಿಸಿದ್ದಾರೆ.

Post a Comment

0Comments

Post a Comment (0)