ಬೆಂಗಳೂರು : ನಗರದ ಕನ್ನಡ ಸಾಹಿತ್ಯ ಪರಷತ್ತಿನ ಕುವೆಂಪು ಸಭಾಂಗಣದಲ್ಲಿ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ದವರು ಏರ್ಪಡಿಸಿದ್ದ ವಿದ್ಯಾ ವಾಚಸ್ಪತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ಶೈಲಜಾ. ಹೊಸಳ್ಳೇರ , ಪ್ರಾಂಶುಪಾಲರು ಸರ್ ಎಂ ವಿಶ್ವೇಶ್ವರಯ್ಯ ಕಲಾ, ವಾಣಿಜ್ಯ ಕಾಲೇಜು ಭದ್ರಾವತಿ ಇವರಿಗೆ ವಿದ್ಯಾ ವಾಚಸ್ಪತಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು,
ಇವರು ೩೫ವರ್ಷಗಳಿಂದ ಕನ್ನಡ ಪ್ರಾಧ್ಯಾಪಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ, ಸಂಸ್ಕೃತಿ ಬೋಧಿಸಿ ಸಲ್ಲಿಸಿದ ಸಾರ್ಥಕ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ, ಡಾ. ಶೈಲಜಾ ಅವರು ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಕೆಲಸ ನಿರ್ವಹಿಸುತ್ತಿದ್ದು ಕು. ವಿ.ವಿ. ಕನ್ನಡ ಅಧ್ಯಯನ ಮಂಡಳಿ ಸದಸ್ಯರಾಗಿ, ಕನ್ನಡ ಪರೀಕ್ಷಾ ಮಂಡಳಿ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದು, ಬೋಧನೆ ಜೊತೆಗೆ ಹಲವಾರು ಪುಸ್ತಕ ಗಳನ್ನು ಪ್ರಕಟಿಸಿದ್ದಾರೆ,
ಪಠ್ಯ ಪುಸ್ತಕಗಳನ್ನು ಸಂಪಾದಿಸಿದ್ದಾರೆ. ಸಂಶೋಧನ ಲೇಖನಗಳು ಪ್ರಕಟವಾಗಿವೆ. ಪ್ರಶಸ್ತಿ ಸ್ವೀಕರಿಸಿದ ಡಾ. ಶೈಲಜಾ ಅವರಿಗೆ ಕಾಲೇಜಿನ ಸಿಡಿಸಿ ಅಧ್ಯಕ್ಷರು, ಕ್ಷೇತ್ರದ ಶಾಸಕರಾದ ಸಂಗಮೇಶ್ವರ ಬಿ.ಕೆ ಅವರು , ಅಧ್ಯಾಪಕ ವರ್ಗ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಿಡಿಸಿ ಸದಸ್ಯರುಗಳು ಈ ಮೂಲಕ ಅಭಿನಂದನೆಗಳನ್ನು ತಿಳಿಸಿರುತ್ತಾರೆ.