ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನ್ಯಾಯಮೂರ್ತಿಗಳಾದ ಶ್ರೀಮತಿ ತಾರಾ ವಿತಾಸ್ತ ಗಂಜು ಪ್ರಮಾಣ ವಚನ ಸ್ವೀಕಾರ

varthajala
0

 ಬೆಂಗಳೂರು, ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನ್ಯಾಯಮೂರ್ತಿಗಳಾದ ಶ್ರೀಮತಿ ತಾರಾ ವಿತಾಸ್ತ ಗಂಜು ಅವರು ಇಂದು ಹೈಕೋರ್ಟ್‍ನ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಾಧೀಶರಾದ ವಿಭು ಬಖ್ರು ಅವರು ಪ್ರಮಾಣ ವಚನ ಬೋಧಿಸಿದರು.


ಮೇ 18, 2022 ರಂದು ದೆಹಲಿ ಹೈಕೋರ್ಟ್‍ನ ಶಾಶ್ವತ ನ್ಯಾಯಾಧೀಶರಾಗಿ ನೇಮಿಸಲಾಗಿತ್ತು. 3 ವರ್ಷಗಳಿಗೂ ಹೆಚ್ಚು ಕಾಲ ದೆಹಲಿ ಹೈಕೋರ್ಟ್‍ನಲ್ಲಿ ಸೇವೆ ಸಲ್ಲಿಸಿದ ನಂತರ, ಈಗ ಕರ್ನಾಟಕದ ಹೈಕೋರ್ಟ್‍ಗೆ ವರ್ಗಾಯಿಸಲಾಗಿದೆ.

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಅಧ್ಯಕ್ಷರಾದ ಮಿತ್ತಲ್ ಕೋಡ್ ಅವರು ನೂತನ ನ್ಯಾಯಾಮೂರ್ತಿಗಳನ್ನು ಸ್ವಾಗತಿಸಿ ಮಾತನಾಡಿ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಪರವಾಗಿ ಮತ್ತು ವೈಯುಕ್ತಿಕವಾಗಿ  ಹೃತ್ಪೂರ್ವಕ ಸ್ವಾಗತಿಸುತ್ತೇನೆ. ಕಾನೂನು ಮತ್ತು ಸಮಾನತೆಯ ನ್ಯಾಯ ಒದಗಿಸುವ ಪ್ರಯತ್ನದಲ್ಲಿ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಬೆಂಗಳೂರು, ಧಾರವಾಡ ಹಾಗೂ ಕಲಬುರಗಿ ವಿಭಾಗ ಪೀಠದ ನ್ಯಾಯಾಧೀಶರು, ಕರ್ನಾಟಕದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ್ ಕಾಮತ್, ಸಹಾಯಕ ಸಾಲಿಸಿಟರ್ ಜನರಲ್, ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಉಪಾಧ್ಯಕ್ಷ ವಿನಯ್ ಬಿ., ಹಿರಿಯ ವಕೀಲರು ಮತ್ತಿತರರು ಉಪಸ್ಥಿತರಿದ್ದರು.

ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ತಾರಾ ವಿತಾಸ್ತ ಗಂಜು ಅವರು ಆಗಸ್ಟ್ 12, 1971 ರಂದು ನವದೆಹಲಿಯಲ್ಲಿ ಜನಿಸಿದ್ದಾರೆ. 1989 ರಲ್ಲಿ ನವದೆಹಲಿಯ ಲೋಧಿ ಎಸ್ಟೇಟ್‍ನಲ್ಲಿರುವ ಸರ್ದಾರ್ ಪಟೇಲ್ ವಿದ್ಯಾಲಯದಲ್ಲಿ ಪ್ರೌಢಶಾಲಾ ವ್ಯಾಸಂಗ ಮಾಡಿದ್ದು, 1992 ರಲ್ಲಿ ದೆಹಲಿ ವಿಶ್ವವಿದ್ಯಾಲಯದ ಲೇಡಿ ಶ್ರೀರಾಮ್ ಕಾಲೇಜಿನಲ್ಲಿ ರಾಜಕೀಯ ವಿಜ್ಞಾನದಲ್ಲಿ ಪದವಿ ಪಡೆದಿದ್ದಾರೆ. ನಂತರ 1995 ರಲ್ಲಿ ದೆಹಲಿ ವಿಶ್ವವಿದ್ಯಾಲಯದ ಕಾನೂನು ವಿಭಾಗದಿಂದ ಕಾನೂನು ಪದವಿಯನ್ನು ಪಡೆದಿದ್ದು, ಆಗಸ್ಟ್ 3, 1995 ರಂದು ದೆಹಲಿಯ ಬಾರ್ ಕೌನ್ಸಿಲ್‍ನಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ.

Post a Comment

0Comments

Post a Comment (0)