ನವದೆಹಲಿ: ರಾಣಿ ಚೆನ್ನಮ್ಮನವರ ಪ್ರತಿಮೆಗೆ ಪುಷ್ಪಾರ್ಚನೆ

varthajala
0

 ನವದೆಹಲಿಯ ಸಂಸತ್ ಭವನದ ಆವರಣದ ಪ್ರೇರಣಾ ಸ್ಥಳದಲ್ಲಿ ಕನ್ನಡನಾಡಿನ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚೆನ್ನಮ್ಮನವರ 247ನೇ ಜಯಂತ್ಯೋತ್ಸವ ಮತ್ತು 201ನೇ ವಿಜಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು.



ಪರಮಪೂಜ್ಯರಾದ ಶ್ರೀ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳವರು ಹಾಗೂ ಹರಿಹರ ಪಂಚಮಸಾಲಿ ಪೀಠದ ಪರಮಪೂಜ್ಯ ಶ್ರೀ ಶ್ರೀ ವಚನಾನಂದ ಸ್ವಾಮೀಜಿಗಳವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ, ರಾಜ್ಯ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಜಗದೀಶ್ ಶೆಟ್ಟರ್ ಅವರು, ರಾಜ್ಯಸಭಾ ಸಂಸದೆ ಹಾಗೂ ಸಮಾಜ ಸೇವಕಿ ಶ್ರೀಮತಿ ಸುಧಾಮೂರ್ತಿಯವರು ಸೇರಿದಂತೆ ಇನ್ನಿತರೆ ಗಣ್ಯಮಾನ್ಯರು ಹಾಗೂ ಸಮಾಜದ ಮುಖಂಡರು, ದೆಹಲಿ ಕನ್ನಡಿಗರು ಉಪಸ್ಥಿತರಿದ್ದರು.

Post a Comment

0Comments

Post a Comment (0)