ಕ್ರಿಶ್ಚಿಯನ್ ಸಮುದಾಯದವರಿಗೆ ವಿವಿಧ ಯೋಜನೆಗಳಿಗೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ

varthajala
0
 ಬೆಂಗಳೂರು, ಅಕ್ಟೋಬರ್ 23 (ಕರ್ನಾಟಕ ವಾರ್ತೆ) : ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ  ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಲ್ಲಿ ಸಾಲ ಪಡೆಯಲು ಅರ್ಹ ಕ್ರಿಶ್ಚಿಯನ್ ಸಮುದಾಯದವರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಕ್ರಿಶ್ಚಿಯನ್ ಸಮುದಾಯದ ಫಲಾನುಭವಿಗಳು ವೃತ್ತಿ ಪ್ರೋತ್ಸಾಹ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ (ಟ್ಯಾಕ್ಸಿ, ಗೂಡ್ಸ್, ಪ್ಯಾಸೆಂಜರ್ ಆಟೋರಿಕ್ಷಾ), ಶ್ರಮಶಕ್ತಿ ಸಾಲ ಯೋಜನೆ,  ಶ್ರಮಶಕ್ತಿ (ವಿಶೇಷ ಮಹಿಳಾ)ಯೋಜನೆ, ವ್ಯಾಪಾರ-ಉದ್ಯಮಗಳಿಗೆ ನೇರ ಸಾಲ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಕ್ರಿಶ್ಚಿಯನ್ ಸಮುದಾಂiÀiದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ, ಅರಿವು (ವಿದ್ಯಾಭ್ಯಾಸ ಸಾಲ) ಯೋಜನೆ ಹಾಗೂ ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.
ಈ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಅರ್ಜಿದಾರರು ಮತೀಯ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರಬೇಕು.  ಕರ್ನಾಟಕ ರಾಜ್ಯದಲ್ಲಿ ಖಾಯಂ ನಿವಾಸಿಯಾಗಿರಬೇಕು.   ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿ,  ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಯೋಜನಾ ವರದಿ ಹಾಗೂ ಅರ್ಜಿದಾರರ ಹಾಗೂ ಜಾಮೀನುದಾರರ  ಎರಡು ಭಾವಚಿತ್ರಗಳನ್ನು ಸಲ್ಲಿಸಬೇಕು.   ಕಡ್ಡಾಯವಾಗಿ ಐಎಫ್‍ಎಸ್‍ಸಿ ಕೋಡ್ ಇರುವ ಬ್ಯಾಂಕ್ ಖಾತೆ ಪಾಸ್ ಬುಕ್ ಪ್ರತಿಯನ್ನು ಸಲ್ಲಿಸಬೇಕು.
ಈ ಯೋಜನೆಗಳಿಗೆ www.kccdclonline.karnataka.gov.in, ಇ-ಮೇಲ್ kccdchelpline@gmail.com  ನಲ್ಲಿ ಅರ್ಜಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಉತ್ತರ ವಿಭಾಗ, #40, 2ನೇ ಅಡ್ಡ ರಸ್ತೆ, ಇಯರಿಂಗ್ ಕ್ಲಿನಿಕ್ ಎದುರು, ನೂರ್  ಮಸೀದಿ ಹತ್ತಿರ, 4ನೇ ಮುಖ್ಯ ರಸ್ತೆ, ವಸಂತಪ್ಪ ಬ್ಲಾಕ್, ಗಂಗಾ ನಗರ, ಬೆಂಗಳೂರು-560032 ಅಥವಾ ದೂರವಾಣಿ ಸಂಖ್ಯೆ: 080-23539786 ಅಥವಾ ಸಹಾಯವಾಣಿ ಸಂಖ್ಯೆ: 6360753075 ನ್ನು ಸಂಪರ್ಕಿಸಬಹುದೆಂದು ಬೆಂಗಳೂರು ನಗರ ಉತ್ತರ ವಿಭಾಗದ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)