ಬೆಂಗಳೂರು, ಅಕ್ಟೋಬರ್ 30 (ಕರ್ನಾಟಕ ವಾರ್ತೆ): ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುμÁ್ಠನ ಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಕ್ರಿಶ್ಚಿಯನ್ ಸಮುದಾಯದವರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಲ್ಲಿ ವೃತ್ತಿ ಪ್ರೋತ್ಸಾಹ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ (ಟ್ಯಾಕ್ಸಿ/ಗೂಡ್ಸ್/ಪ್ಯಾಸೆಂಜರ್ ಆಟೋರಿಕ್ಷಾ), ಶ್ರಮ ಶಕ್ತಿ ಸಾಲ ಯೋಜನೆ, ಶ್ರಮಶಕ್ತಿ (ವಿಶೇಷ ಮಹಿಳಾ) ಯೋಜನೆ, ವ್ಯಾಪಾರ / ಉದ್ಯಮಗಳಿಗೆ ನೇರ ಸಾಲ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಕ್ರಿಶ್ಚಿಯನ್ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ, ಅರಿವು (ವಿದ್ಯಾಭ್ಯಾಸ ಸಾಲ)ಯೋಜನೆ, ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಬಹುದಾಗಿದೆ.
ಈ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹತೆಗಳು ಮತ್ತು ಮಾನದಂಡ:
ಅರ್ಜಿದಾರರು ಮತೀಯ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರಬೇಕು, ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನಚೀಟಿ, ಬ್ಯಾಂಕ್ ಖಾತೆ ಪುಸ್ತಕ ಪ್ರತಿ, ಯೋಜನಾ ವರದಿ ಹಾಗೂ ಅರ್ಜಿದಾರರ ಹಾಗೂ ಜಾಮೀನುದಾರರ 2 ಭಾವಚಿತ್ರಗಳು.
ಅರ್ಜಿದಾರರು ಕಡ್ಡಾಯವಾಗಿ ಐಎಫ್‍ಎಸ್‍ಸಿ ಕೋಡ್ ಇರುವ ಬ್ಯಾಂಕ್ ಖಾತೆ ಪಾಸ್ ಬುಕ್ ಪ್ರತಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿದೆ.
ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ : www.kccdclonline.karnataka. gov.in, ಇ-ಮೇಲ್ kccdchelpline@gmail.com ಹಾಗೂ ಸಹಾಯವಾಣಿ ಸಂಖ್ಯೆ :6360753075 ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಉತ್ತರ ವಿಭಾಗ, ನಂ.40, 2ನೇ ಅಡ್ಡರಸ್ತೆ, ಇಯರಿಂಗ್ ಕ್ಲಿನಿಕ್ ಎದುರು, ನೂರ್ ಮಸೀದಿ ಹತ್ತಿರ, 4ನೇ ಮುಖ್ಯರಸ್ತೆ, ವಸಂತಪ್ಪ ಬ್ಲಾಕ್, ಗಂಗಾನಗರ, ಬೆಂಗಳೂರು-560032 ಕಚೇರಿ ವಿಳಾಸ ಅಥವಾ ದೂರವಾಣಿ ಸಂಖ್ಯೆ : 080-23539786 ಗೆ ಸಂಪರ್ಕಿಸಬಹುದು ಎಂದು ನಿಮಗದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.