ಬೆಂಗಳೂರು, ಅಕ್ಟೋಬರ್ 08, (ಕರ್ನಾಟಕ ವಾರ್ತೆ): ಭಾರತ ಸರ್ಕಾರವು ಉದ್ಯೋಗ ಸೃಷ್ಟಿಯನ್ನು ಬೆಂಬಲಿಸಲು, ಉದ್ಯೋಗಾವಕಾಶವನ್ನು ಹೆಚ್ಚಿಸಲು ಮತ್ತು ಎಲ್ಲಾ ವಲಯಗಳಲ್ಲಿ ಸಾಮಾಜಿಕ ಭದ್ರತೆಯನ್ನು ಒದಗಿಸಲು, ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜ್‍ಗಾರ್ ಯೋಜನೆ- 2025 (PMVBRY2025) ಅನ್ನು ಪ್ರಾರಂಭಿಸಿದೆ.
ಯೋಜನೆಯ ಸಂಕ್ಷಿಪ್ತ ವಿವರಗಳು:
ಮೊದಲ ಬಾರಿಗೆ ಕೆಲಸ ಮಾಡುವ ಉದ್ಯೋಗಿಗಳಿಗೆ ಒಂದು ತಿಂಗಳ ವೇತನ ರೂ. 15,000/-, 12 ತಿಂಗಳು ನಿರಂತರ ಅವಧಿಗೆ ಎರಡು ಕಂತುಗಳಲ್ಲಿ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಿಗುತ್ತದೆ. ಈ ಮೊತ್ತವನ್ನು ನೇರವಾಗಿ ಅವರ ಆಧಾರ್ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಹೆಚ್ಚುವರಿ ಉದ್ಯೋಗವನ್ನು ಸೃಷ್ಟಿಸಲು ಉದ್ಯೋಗದಾತರಿಗೆ ಎರಡು ವರ್ಷಗಳ ಅವಧಿಗೆ ಪ್ರತಿ ಹೊಸ ಉದ್ಯೋಗಕ್ಕೆ ತಿಂಗಳಿಗೆ ರೂ. 3,000/- ವರೆಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಉತ್ಪಾದನಾ ವಲಯಕ್ಕೆ ಇನ್ನೂ ಎರಡು ವರ್ಷಗಳವರೆಗೆ ವಿಸ್ತøತ ಪ್ರಯೋಜನಗಳನ್ನು ನೀಡಲಾಗುತ್ತದೆ. ಉದ್ಯೋಗದಾತರಿಗೆ ಪಾವತಿಗಳನ್ನು ನೇರವಾಗಿ ಅವರ ಪ್ಯಾನ್-ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗಳಿಗೆ ಮಾಡಲಾಗುತ್ತದೆ.
ಈ ಯೋಜನೆಯ ಪ್ರಯೋಜನಗಳು ಆಗಸ್ಟ್ 01, 2025 ಮತ್ತು ಜುಲೈ 31, 2027 ರ ನಡುವೆ ರಚಿಸಲಾದ ಉದ್ಯೋಗಗಳಿಗೆ ಅನ್ವಯಿಸುತ್ತದೆ ಎಂದು ಇಂದಿರಾನಗರ ಪ್ರಾದೇಶಿಕ ಪಿಎಫ್ ಕಚೇರಿ ಆಯುಕ್ತರಾದ ಎನ್. ಗೋಪಾಲಕೃಷ್ಣನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.