ಪ್ರಾಗೈತಿಹಾಸಿಕ ನೆಲೆ ಹಿರೇಬೆಣಕಲ್ ಕುರಿತಾದ ಛಾಯಾಚಿತ್ರ ಪ್ರದರ್ಶನ

varthajala
0

 ಬೆಂಗಳೂರು, ಅಕ್ಟೋಬರ್ 18, (ಕರ್ನಾಟಕ ವಾರ್ತೆ): ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ವತಿಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಇರುವಂತಹ ಪ್ರಾಗೈತಿಹಾಸಿಕ ನೆಲೆ ಹಿರೇಬೆಣಕಲ್ ಕುರಿತಾದ ಛಾಯಾಚಿತ್ರ ಪ್ರದರ್ಶನವನ್ನು ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ವೆಂಕಟಪ್ಪ ಚಿತ್ರಶಾಲೆಯಲ್ಲಿ ಪ್ರದರ್ಶಿಸಲಾಗಿದೆ. ಈ ಸಂಗ್ರಹಾಲಯಕ್ಕೆ ಆಗಮಿಸುವ ವೀಕ್ಷಕರು ಈ ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಬಹುದಾಗಿದೆ ಎಂದು ಸರ್ಕಾರಿ ವಸ್ತು ಸಂಗ್ರಹಾಲಯಗಳು ಮತ್ತು ವೆಂಕಟಪ್ಪ ಚಿತ್ರಶಾಲೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment

0Comments

Post a Comment (0)