ಬೆಂಗಳೂರು, ಅಕ್ಟೋಬರ್ 08, (ಕರ್ನಾಟಕ ವಾರ್ತೆ):
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕಛೇರಿ, ಹುಬ್ಬಳ್ಳಿಯಲ್ಲಿ ITI COPA (ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಂ ಅಸಿಸ್ಟೆಂಟ್) ವಿದ್ಯಾರ್ಹತೆ ಹೊಂದಿದ ಶಿಶಿಕ್ಷುದಾರರನ್ನು ತರಬೇತಿಗೆ ನಿಯೋಜಿಸಿಕೊಳ್ಳಲಾಗುತ್ತಿದೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕಛೇರಿಯ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು, ಇವರಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 11:00 ಗಂಟೆಗೆ ಕಛೇರಿ ವೇಳೆಯಲ್ಲಿ ನೇರ ಸಂದರ್ಶನಕ್ಕೆ ಆಸಕ್ತ ಅಭ್ಯರ್ಥಿಗಳು ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್‍ಸೈಟ್ ವಿಳಾಸ www.nwkrtc.karnataka.gov.in ನ್ನು ವೀಕ್ಷಿಸಬಹುದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.