ಬೆಳಗಾವಿ ವಿಧಾನ ಮಂಡಳ ಚಳಿಗಾಲ ಅಧಿವೇಶನ-2025 ವಸತಿ, ಸಾರಿಗೆ, ಊಟೋಪಹಾರದ ಸಮರ್ಪಕ ವ್ಯವಸ್ಥೆ ಕಲ್ಪಿಸಲು: ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಸೂಚನೆ

varthajala
0

 ಬೆಳಗಾವಿ / ಬೆಂಗಳೂರು, ನವೆಂಬರ್ 19 (ಕರ್ನಾಟಕ ವಾರ್ತೆ): ಡಿಸೆಂಬರ್ 8ರಿಂದ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಬೆಳಗಾವಿ ಚಳಿಗಾಲ ಅಧಿವೇಶನ ಯಶಸ್ವಿಗೊಳಿಸಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಸೂಚಿಸಿದರು.


ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಭಾಧ್ಯಕ್ಷರು, ಡಿಸೆಂಬರ್ 8 ರಿಂದ 19 ರ ವರೆಗೆ ಜರುಗಲಿರುವ ಚಳಿಗಾಲದ ಅಧಿವೇಶನಕ್ಕೆ ನಿಯೋಜಿತ ಅಧಿಕಾರಿ ಸಿಬ್ಬಂದಿ ಬದ್ದತೆಯೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ಅಧಿವೇಶನ ಯಶಸಸ್ವಿಗೊಳಿಸಬೇಕು ಎಂದು ತಿಳಿಸಿದರು.

ಅಧಿವೇಶನದ ಸಂದರ್ಭದಲ್ಲಿ ಎದುರಾಗುವ ಯಾವುದೇ ರೀತಿಯ ಸಮಸ್ಯೆಗಳನ್ನು ಕೂಡಲೇ ಸಂಬಂಧಿಸಿದವರ ಗಮನಕ್ಕೆ ತರುವುದರ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು. ದೂರಸಂಪರ್ಕ ಹಾಗೂ ಇಂಟರ್ ನೆಟ್ ಸಮಸ್ಯೆಗಳು ತಲೆದೋರದಂತೆ ನಿಗಾವಹಿಸಬೇಕು. ಅಗತ್ಯವಿರುವ ಗಣಕ ಯಂತ್ರ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು.

ಅಧಿವೇಶನ ಸಂದರ್ಭದಲ್ಲಿ ಪ್ರತಿಭಟನಕಾರರಿಗೆ ಸೂಕ್ತ ಸ್ಥಳಾವಕಾಶವನ್ನು ಗುರುತಿಸುವುದರ ಜೊತೆಗೆ ಪ್ರತಿಭಟನಾ ಸ್ಥಳದಲ್ಲಿ ಅಗತ್ಯ ಸೌಲಭ್ಯ ಹಾಗೂ ಸೂಕ್ತ ಪೊಲೀಸ್ ಭದ್ರತೆ ಒದಗಿಸಲು ಕ್ರಮ ವಹಿಸಲು ತಿಳಿಸಿದರು.

Post a Comment

0Comments

Post a Comment (0)