ಬೆಂಗಳೂರು, ನವೆಂಬರ್ 19 (ಕರ್ನಾಟಕ ವಾರ್ತೆ): ಮೀನುಗಾರಿಕೆ ನಿರ್ದೇಶನಾಲಯದ ವತಿಯಿಂದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳ-2025 ಸಮಾರಂಭವನ್ನು ಬೆಂಗಳೂರಿನ ಹೆಬ್ಬಾಳದ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ 2025 ನೇ ನವೆಂಬರ್ 21 ರಿಂದ ನವೆಂಬರ್ 23 ರವರೆಗೆ ಆಯೋಜಿಸಲಾಗಿದೆ.
ನವೆಂಬರ್ 21 ರಂದು ತಾಂತ್ರಿಕ ಗೋಷ್ಠಿಗಳು, ಪ್ರಗತಿಪರ ಮೀನು ಕೃಷಿಕರ ಅನುಭವ ಹಂಚಿಕೆ, ಕೃಷಿ ವಿಜ್ಞಾನಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನವೆಂಬರ್ 22 ರಂದು ಬೆಳಿಗ್ಗೆ 11.00 ಗಂಟೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಘನ ಉಪಸ್ಥಿತಿಯಲ್ಲಿ ಮಾನ್ಯ ಮೀನುಗಾರಿಕೆ ಮತ್ತು ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಮತ್ತು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ್ ಎಸ್ ವೈದ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಾನ್ಯ ನಗರಾಭಿವೃದ್ಧಿ ಸಚಿವರಾದ ಸುರೇಶ್ ಬಿ.ಎಸ್. ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ ನಾರಾಯಣಸ್ವಾಮಿ ಸೇರಿದಂತೆ ರಾಜ್ಯದ ಎಲ್ಲಾ ಗೌರವಾನ್ವಿತ ಲೋಕಸಭಾ, ರಾಜ್ಯಸಭಾ, ವಿಧಾನಸಭಾ, ವಿಧಾನಪರಿಷತ್ ಸದಸ್ಯರುಗಳು ಹಾಗೂ ಎಲ್ಲಾ ಆಯೋಗ, ನಿಗಮ ಮಂಡಳಿಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು ಮತ್ತು ಸದಸ್ಯರುಗಳು ಉಪಸ್ಥಿತರಿರುವರು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.